Monday, December 23, 2024

ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ದಾವಣಗೆರೆ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ನಾಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES