Wednesday, May 22, 2024

ತೀವ್ರ ಒತ್ತಡದ ಬಳಿಕ ರಾಜೀನಾಮೆ ನೀಡಿದ ಬೊರೀಸ್ ಜಾನ್ಸನ್

ಬ್ರಿಟನ್‌ನಲ್ಲಿ 5 ಕ್ಯಾಬಿನೆಟ್ ಸಚಿವರು, ಅಧಿಕಾರಿಗಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ರಾಜೀನಾಮೆ ನೀಡಿದ್ರು…ರಾಜಕೀಯ ಬಿಕ್ಕಟ್ಟು ಒಂದ್ಕೆಡೆಯಾದ್ರೆ, ಮತ್ತೊಂದು ಕಡೆ ಸ್ವಪಕ್ಷದ ನಾಯಕರಿಂದಲೇ ಆರೋಪ ಕೇಳಿ ಬಂದಿತ್ತು.. ಈ ಬೆನ್ನಲ್ಲೇ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸಹ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ತೀವ್ರ ಒತ್ತಡದ ಬೆನ್ನಲ್ಲೇ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ್ದಾರೆ. ಹಗರಣಗಳು, ಸ್ವಪಕ್ಷದ ನಾಯಕರ ಭಾರಿ ವಿರೋಧದಿಂದ ಬೊರೀಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಮುಂದಿನ ಪ್ರಧಾನಿ ಆಯ್ಕೆಯಾಗುವ ವರೆಗೆ ಬೊರಿಸ್ ಜಾನ್ಸನ್ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ಅಕ್ಟೋಬರ್ 2022ರಲ್ಲಿ ಹೊಸ ಪ್ರಧಾನಿ ಆಯ್ಕೆಯಾಗಲಿದ್ದಾರೆ. ಅಲ್ಲಿವರೆಗೆ ಬೋರಿಸ್ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ.

ಕನ್ಸರ್ವೇಟೀವ್ ಪಕ್ಷದ ನಾಯಕ ಸ್ಥಾನದಿಂದ ಬೊರಿಸ್ ಜಾನ್ಸನ್ ಕೆಳಗಿಳಿದಿದ್ದಾರೆ. ಮುಂದಿನ ಪ್ರಧಾನಿ ಆಯ್ಕೆವರೆಗೂ ಸ್ಥಾನದಲ್ಲಿ ಮುಂದುವರಿಯುವುದಾಗಿ ಬೊರಿಸ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಮುಂದಿನ ವಾರದಿಂದ ನೂತನ ಪ್ರಧಾನಿ ಆಯ್ಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಬೊರೀಸ್ ಹೇಳಿದ್ದಾರೆ. ಪ್ರಧಾನಿಯಾಗಿ ನಾನು ಮಾಡಿದ ಕಾರ್ಯಗಳು ನನಗೆ ತೃಪ್ತಿ ತಂದಿದೆ. ಸರ್ಕಾರದ ಸಾಧನೆಗಳಿಗೆ ಹೆಮ್ಮೆಯಾಗುತ್ತಿದೆ. ನನ್ನ ರಾಜೀನಾಮೆಯಿಂದ ಕೆಲವರು ನಿರಾಶೆಗೊಳ್ಳುತ್ತಾರೆ. ಹಲವರು ನಿರಾಶೆಗೊಂಡಿದ್ದಾರೆ ಎಂದು ತಿಳಿದಿದೆ. ವಿಶ್ವದ ಅತ್ಯುತ್ತಮ ಸ್ಥಾನವನ್ನು ತ್ಯಜಿಸುವುದು ನನಗೂ ಕಷ್ಟದ ಕೆಲಸ. ಇದರಿಂದ ದುಃಖಿತನಾಗಿದ್ದೇನೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಡೌನಿಂಗ್ ಸ್ಟ್ರೀಟ್ನಲ್ಲಿ ಮಾಡಿದ ಭಾಷಣದಲ್ಲಿ ಬೊರಿಸ್ ಜಾನ್ಸನ್ ಭಾವುಕರಾಗಿದ್ದಾರೆ.

ಭಾರೀ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆ 40 ಮಂದಿ ರಾಜೀನಾಮೆ ನೀಡಿದ್ದರು. ಹೀಗಾಗಿ ಭಾರಿ ರಾಜಕೀಯ ಹಗ್ಗಜಗ್ಗಾಟ ಜೋರಾಗಿತ್ತು.. ಮೂರು ವರ್ಷಗಳ ಕಾಲ ಪ್ರಧಾನಿಯಾಗಿದ್ದ ಬೋರಿಸ್ ಜಾನ್ಸನ್ ಕೊನೆಗೂ ರಾಜೀನಾಮೆ ನೀಡಿದ್ದು, ಹೊಸ ಪ್ರಧಾನಿಯ ಆಗಮನಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.

ಜಾನ್ಸನ್‌ ನಾಯಕತ್ವದ ಬಗ್ಗೆ ಅಪಸ್ವರ ಎತ್ತಿ ಬೆಂಗಳೂರಿನ ಇಸ್ಫೋಸಿಸ್‌ ನಾರಾಯಣಮೂರ್ತಿ ಅವರ ಅಳಿಯ ಹಾಗೂ ಬ್ರಿಟನ್‌ ವಿತ್ತ ಸಚಿವ ರಿಷಿ ಸುನಾಕ್‌ ಮತ್ತು ಆರೋಗ್ಯ ಸಚಿವ ಸಾಜಿದ್‌ ಜಾವಿದ್‌ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಇಲ್ಲಿಂದ ಬೊರಿಸ್ ಜಾನ್ಸನ್ ಮೇಲೆ ರಾಜೀನಾಮೆ ಒತ್ತಡ ಹೆಚ್ಚಾಯಿತು. ಇತ್ತ ಕನ್ಸರ್ವೇಟೀವ್ ಪಾರ್ಟಿಯ ಹಲವು ನಾಯಕರು ಬಂಡಾಯ ಎದ್ದು ರಾಜೀನಾಮೆ ನೀಡಿದ್ದರು. ಇದೀಗ ರಿಷಿ ಸುನಾಕ್‌ ಅವರತ್ತವೇ ಎಲ್ಲರ ಚಿತ್ತ ನೆಟ್ಟಿದ್ದು, ಮುಂದಿನ ಪ್ರಧಾನಿ ಇವ್ರೇ ಎನ್ನಲಾಗ್ತಿದೆ..

ಬ್ಯೂರೋ ರಿಪೋರ್ಟ್‌ ಪವರ್‌ ಟಿವಿ

RELATED ARTICLES

Related Articles

TRENDING ARTICLES