ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಆಶಾಢ ಮಾಸದ ಸಂಭ್ರಮದ ಹಿನ್ನಲೆಯಲ್ಲಿ ಮುಂಜಾನೆಯಿಂದಲೇ ನಾಡಿನ ಅದಿದೇವತೆಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ನಾಡದೇವತೆ ತಾಯಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ವಿಶೇಷ ಪೂಜೆ ಸಲ್ಲಿಸಲಾಗಿಯಿತು. ಬೆಳಗ್ಗೆಯಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಇಂದು ರಾತ್ರಿ 9.30ರವರೆಗೆ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಎಂದಿನಂತೆ ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ನಿಷೇಧ ಮಾಡಿದ್ದಾರೆ. ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ.