Friday, November 22, 2024

ಭಾರೀ ಮಳೆಗೆ ಮನೆ ಕುಸಿದು ವೃದ್ಧೆ ಸಾವು

ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಕಲಬುರಗಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಶಿಥಿಲಗೊಂಡಿದ್ದ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡ ಘಟನೆ ಚಿತ್ತಾಪೂರ ಪಟ್ಟಣದಲ್ಲಿ ನಡೆದಿದೆ.

ಆರೀಫಾ ಬೇಗಂ ಮೃತ ವೃದ್ಧೆಯಾಗಿದ್ದಾರೆ. ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಅನೇಕ‌ ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ರಸ್ತೆಗಳ ಮೇಲೆ ನೀರು ನಿಂತು ಅವಘಡಗಳು ಸಂಭವಿಸುತ್ತಿವೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ನೌಕರರು ಮಳೆಯಿಂದಾಗಿ ಪರದಾಡುವಂತಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಅರ್ಭಟಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲೆಯ ಕೆಲ ಭಾಗಗಳಲ್ಲಿ ರೆಡ್ ಅಲರ್ಟ್ ಹಾಗೂ ಇನ್ನೂ ಕೆಲ ಭಾಗಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES