ಮೈಸೂರು : ರಾಜ್ಯದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಕಾವೇರಿ ಜಲನಯನ ಪ್ರದೇಶದಲ್ಲಿ ಒಳಹರಿವು ಹೆಚ್ಚಾಗಿರುವುದರಿಂದ ಕಬಿನಿ ಜಲಾಶಯ ಭರ್ತಿಯಾಗಿದೆ.
ಕಳೆದ 1 ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಬಿನಿ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ 10 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಕ್ಕೆ ಬಿಡಲಾಗಿದೆ.ಜಲಾಶಯದ ಗರಿಷ್ಟ ನೀರಿನ ಮಟ್ಟ 22.84 ಅಡಿ ಇದ್ದು, ಇಂದಿನ ನೀರಿನ ಮಟ್ಟ 22.82 ಆಗಿದೆ. ಪ್ರಸ್ತುತ ಜಲಾಶಯಕ್ಕೆ 15 ಸಾವಿರ ಕ್ಯೂಸೆಕ್ಸ್ ನೀರು ಒಳ ಹರಿವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ನೀರನ್ನು ಬಿಡಲಾಗ್ತಿದೆ.
ವೈನಾಡಿನಲ್ಲಿ ಮಳೆ ಸ್ವಲ್ಪ ಪ್ರಮಾಣದಲ್ಲಿ ತಗ್ಗಿರುವುದರಿಂದ ಒಳ ಹರಿವು ಕೊಂಚ ಇಳಿಕೆ ಕಂಡಿದೆ. ಇದೇ ವೇಳೆ ಕೆಆರ್ ಎಸ್ ಜಲಾಶಯ ಭರ್ತಿಗೆ ಕೂಡ ಕ್ಷಣಗಣನೆ ಆರಂಭಗೊಂಡಿದೆ.