Monday, December 23, 2024

ಆಗುಂಬೆ ಘಾಟ್’ ರಸ್ತೆ ಬಂದ್

ಶಿವಮೊಗ್ಗ : ಜಿಲ್ಲೆಯ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು. ಈ ಅವಧಿಯಲ್ಲಿ ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಕಾರ್ಕಳ-ಮಂಗಳೂರು, ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಕಾರ್ಕಳ-ಮಂಗಳೂರು, ತೀರ್ಥಹಳ್ಳಿ-ಮಾಸ್ತಿಕಟ್ಟೆ- ಕುಂದಾಪುರ ಮಾರ್ಗವನ್ನು ವಾಹನ ಸಂಚಾರಕ್ಕೆ ಬಳಸುವಂತೆ ಅವರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES