Monday, December 23, 2024

ಯುವ ಜನರ ಸಂಖ್ಯೆ ಹೆಚ್ಚಿರುವುದು ದೇಶಕ್ಕೆ ಲಾಭದಾಯಕ: ಕೆ. ಸುಧಾಕರ್‌

ಬೆಂಗಳೂರು: ಭಾರತದ ಜನಸಂಖ್ಯೆ 140 ಕೋಟಿಗೆ ಸಮೀಪಲ್ಲಿದ್ದರೂ, ಯುವ ಜನರ ಸಂಖ್ಯೆ ಹೆಚ್ಚಿರುವುದು ದೇಶಕ್ಕೆ ಲಾಭದಾಯಕ. ಆದರೂ ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಕರೆ ನೀಡಿದರು.

ವೈದ್ಯಕೀಯ ಆವಿಷ್ಕಾರ ಹಾಗೂ ಉತ್ಕೃಷ್ಟ ಆರೋಗ್ಯ ಸೇವೆಗಳಿಂದಾಗಿ ಜನರ ಗರಿಷ್ಠ ವಯೋಮಿತಿ 65 – 70ಕ್ಕೆ ತಲುಪಿದೆ. ಮುಂದುವರಿದ ದೇಶಗಳಲ್ಲಿ 80 ವರ್ಷ ವಯಸ್ಸಿನವರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಜಪಾನ್‌, ಇಟಲಿ, ಸ್ಪೇನ್‌ ಮೊದಲಾದ ದೇಶಗಳಲ್ಲಿ ಹಿರಿಯ ನಾಗರಿಕರು ಹೆಚ್ಚಿದ್ದು, ಯುವ ಜನರ ಸಂಖ್ಯೆ ಕಡಿಮೆಯಾಗಿದೆ. ಕುಟುಂಬದಲ್ಲಿ ಹೆಚ್ಚು ಮಕ್ಕಳಿದ್ದರೆ ಖರ್ಚು ಹೆಚ್ಚಾಗುತ್ತದೆ. ಕಡಿಮೆ ಮಕ್ಕಳಿದ್ದರೆ ದೇಶ ಪ್ರಗತಿಯಾಗುತ್ತದೆ ಎಂದರು.

ಇನ್ನು ಭಾರತದಲ್ಲಿ ಶೇ.60 ರಷ್ಟು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಇಂತಹ ಯುವ ಜನರು ದೇಶದ ಶಕ್ತಿಯಾಗಿದ್ದಾರೆ. ಜನಸಂಖ್ಯೆ ಹೆಚ್ಚಿದ್ದರೂ, ಯುವ ಜನರು ಹೆಚ್ಚಿರುವುದರಿಂದ ದೇಶಕ್ಕೆ ಲಾಭವಾಗಿದೆ. ಜಗತ್ತಿನಲ್ಲಿ ಭಾರತ ಮೂರನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯಾಗಿದೆ. ಅತಿ ಹೆಚ್ಚು ಗ್ರಾಹಕರನ್ನು ದೇಶ ಹೊಂದಿರುವುದರಿಂದ ಬಹುರಾಷ್ಟ್ರೀಯ ಕಂಪನಿಗಳು ಇತ್ತ ಕಡೆ ನೋಡುತ್ತಿವೆ ಎಂದರು.

RELATED ARTICLES

Related Articles

TRENDING ARTICLES