Thursday, January 9, 2025

ಬಿಜೆಪಿಗೆ ಅಧಿಕಾರ ಪಡೆಯೋದೆ ಮುಖ್ಯ ಧ್ಯೇಯ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ಸಂಸತ್ತಿನಲ್ಲಿ ಬಿಜೆಪಿ ಬಹುಮತ ಸದಸ್ಯರ ಸಂಖ್ಯೆ ಹೊಂದಿದೆ. ಆದರೆ ದೇಶದಲ್ಲಿ ಒಟ್ಟಾರೆ ಶಾಸಕರಲ್ಲಿ ಶೇ. 25ರಿಂದ 30ರಷ್ಟು ಮಾತ್ರ ಬಿಜೆಪಿ ಶಾಸಕರಿದ್ದಾರೆ. ಆದರೂ ಹಿಂಬಾಗಿಲಿನಿಂದ ಸರ್ಕಾರ ರಚಿಸಿ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಂಡಿಚೇರಿಯಿಂದ ಹಿಡಿದು ದಕ್ಷಿಣ ಭಾರತದವರೆಗಿನ ರಾಜ್ಯಗಳಲ್ಲಿ ಪಕ್ಷವಾರು ವಿವರ ನೋಡಿದರೆ ಸ್ಪಷ್ಟವಾಗಿ ಗೊತ್ತಾಗುತ್ತದೆ. ಬಿಹಾರ, ಕರ್ನಾಟಕ, ಆಂಧ್ರ ಪ್ರದೇಶ, ನವದೆಹಲಿ, ಪಂಜಾಬ್, ಮಹಾರಾಷ್ಟ್ರ,ತಮಿಳನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಬಿಜೆಪಿ ಶಾಸಕರು ಎಷ್ಟಿದ್ದಾರೆ ಎಂಬುದನ್ನು ಬಿಜೆಪಿಯವರೇ ಲೆಕ್ಕ ಮಾಡಲಿ ಎಂದು ಸವಾಲು ಹಾಕಿದರು.

ಇನ್ನು ದೇಶದ ಒಟ್ಟಾರೆ ಶಾಸಕರ ಸಂಖ್ಯೆಯಲ್ಲಿ ಬಿಜೆಪಿ ಶೇ.‌25 ರಿಂದ 30ರಷ್ಟು ಮಾತ್ರ ಶಾಸಕರನ್ನು ಬಿಜೆಪಿ ಹೊಂದಿದೆ.‌ ಕರ್ನಾಟಕ, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿ ಸರ್ಕಾರ ಹೇಗೆ ಮಾಡಿದರು ಎಂಬುದು ಎಲ್ಲರಿಗೆ ಗೊತ್ತಿದೆ. ಈಗ ಗೋವಾದಲ್ಲಿ ಮತ್ತೆ ಕಮಲ ಆಪರೇಷನ್ ಮಾಡಲು ಮುಂದಾಗಿರುವುದು ನಾಚಿಗೇಡಿತನದ ಸಂಗತಿ ಎಂದು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES