Wednesday, December 25, 2024

ಸರ್ಕಾರದ ವಿರುದ್ಧ ಸಿಡಿದೆದ್ದ ರಾಜ್ಯದ ಕಬ್ಬು ಬೆಳೆಗಾರರು

ಬೆಂಗಳೂರು : ಇಂದು ರಾಜ್ಯಧಾನಿಯಲ್ಲಿ ಅನ್ನದಾತರ ಪ್ರತಿಭಟನೆ ಮೆರವಣಿಗೆ ನಡೆಯಲಿದ್ದು, ಸಿಎಂ ಮನೆಗೆ ಮುತ್ತಿಗೆ ಹಾಕಲಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆಯಲಿದೆ ಭಾರಿ ಪ್ರತಿಭಟನೆ ಮೆರವಣಿಗೆ ನಡೆಯಲಿದ್ದು, ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರೈತರು ಸಿಎಂ ಮನೆ ಮುತ್ತಿಗೆ ಹಾಕಲಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಬೃಹತ್ ರ್ಯಾಲಿ ನಡೆಯಲಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಸಿಡಿದೆದ್ದಿದ್ದಾರೆ.

ಇನ್ನು, ಕಬ್ಬು ಬೆಳೆಗಾರರಿಗೆ ಬೆಲೆಯಲ್ಲಿ ಮೋಸ, ತೂಕದಲ್ಲಿ ವಂಚನೆ ಹಾಗೂ ಪಾವತಿಯಲ್ಲಿ ವಿಳಂಬವಾಗುತ್ತಿದ್ದು, ಈ ಎಲ್ಲಾ ವಿಚಾರ ಗೊತ್ತಿದ್ರು ಸರ್ಕಾರ ಇದರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ರೈತರು ರಾಜಧಾನಿಗೆ ಬರುತ್ತಿದ್ದು, ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಿಎಂ ಮನೆ ಮುತ್ತಿಗೆ ಹಾಕಲಿದ್ದಾರೆ.

RELATED ARTICLES

Related Articles

TRENDING ARTICLES