Monday, December 23, 2024

ಕಾಂಗ್ರೆಸ್‍ನವರಿಗೆ ಹೇಗೆ ವರ್ತಿಸಬೇಕೆಂಬುದೇ ಗೊತ್ತಿಲ್ಲ: ಬಿ.ಸಿ.ನಾಗೇಶ್

ಮಡಿಕೇರಿ : ದೀರ್ಘಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್‍ಗೆ ಪ್ರತಿಪಕ್ಷವಾಗಿ ಹೇಗೆ ವರ್ತಿಸಬೇಕು ಎನ್ನುವುದೇ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕಿಡಿಕಾರಿದರು.

ಕೊಡಗಿನಲ್ಲಿ ಮಳೆ ಆರ್ಭಟ ಹೆಚ್ಚಾಗಿ ಅವಾಂತರಗಳು ಸೃಷ್ಟಿಯಾಗಿದ್ದರೂ, ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್ ಅವರು ಆರೋಪ ಮಾಡಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು ಎಂದರು.

10 ದಿನಗಳ ಹಿಂದೆಯಷ್ಟೆ ಬಂದು ಮಳೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದ್ದೆ. ಅಷ್ಟೇ ಅಲ್ಲದೇ ಕಂದಾಯ ಸಚಿವ ಆರ್.ಅಶೋಕ್ ಸಹ ಇತ್ತೀಚೆಗಷ್ಟೆ ಬಂದು ಪರಿಶೀಲನೆ ನಡೆಸಿದ್ದರು. ಸರ್ಕಾರ ಕೊಡಗನ್ನು ಮರೆತಿದೆ ಎನ್ನುವ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಕಾರ್ಯಪಡೆ ರಚಿಸಲಾಗಿದೆ. 2018ರ ದುರಂತದ ಮಾದರಿಯಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ವಿತರಿಸಲಾಗಿದೆ ಎಂದರು.

RELATED ARTICLES

Related Articles

TRENDING ARTICLES