Wednesday, January 22, 2025

‘ಅಪ್ಪು’ ಹೆಸರಲ್ಲಿ ಫ್ಲವರ್ ಶೋ: ಸಚಿವ ಮುನಿರತ್ನ

ಬೆಂಗಳೂರು: ಈ ವರ್ಷ ಬೆಂಗಳೂರಿನ ಲಾಲ್‍ಬಾಗ್​​ನಲ್ಲಿ ಫ್ಲವರ್ ಶೋ ನಡೆಯಲಿದೆ. ಆಗಸ್ಟ್ 5 ರಿಂದ 15 ರವರೆಗೆ ಫ್ಲವರ್ ಶೋ ನಡೆಯಲಿದ್ದು, ಆ.5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಫ್ಲವರ್ ಶೋ ನಡೆಯಲಿದೆ. ಆಗಸ್ಟ್ 15ರ ಬಳಿಕ ಒಂದೆರಡು ದಿನಗಳ ಕಾಲ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ದಿ.ನಟ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಡೆಯುತ್ತಿರುವ ಈ ಬಾರಿಯ ಫ್ಲವರ್ ಶೋಗೆ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದರು.

ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ ಪುನೀತ್ ಹಾಗೂ ಗಾಜನೂರಿನ ಮನೆ ವಿಶೇಷವಾಗಿದೆ ಎಂದರು. ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆ ನಷ್ಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಂಪೂರ್ಣ ವರದಿ ಅಧಿಕಾರಿಗಳು ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ಏನೇನು ನಷ್ಟ ಉಂಟಾಗಿದೆಯೋ ಅದನ್ನು ಗಮನಿಸುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜೊತೆ ಇದ್ದೇವೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES