ಬೆಂಗಳೂರು : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಬದಲಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಇಂದು ಮತ್ತು ನಾಳೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಆರೆಂಜ್ ಅಲರ್ಟ್ ನಲ್ಲಿ 115 ಮಿಮೀ ನಿಂದ 204 ಮಿಮೀ ವರೆಗೆ ಭಾರೀ ಮಳೆ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳಿಗೆ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಗುರುವಾರದಿಂದ ಕರಾವಳಿಗೆ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಪಶ್ಚಿಮ ಘಟ್ಟದ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮತ್ತೆ ಮೂರು ದಿನಗಳ ಕಾಲ ಹಾಸನ ಸೇರಿದಂತೆ ಪ.ಘ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ ಐದು ದಿನವೂ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆ, ಹಾವೇರಿ ಹೊರತುಪಡಿಸಿ ಉ.ಒಳನಾಡು ಜಿಲ್ಲೆಗಳಿಗೆ ನಾಳೆಯಿಂದ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ.