ಬೆಂಗಳೂರು : ಕಿರಾತಕರಿಂದ ಸಿದ್ದರಾಮಯ್ಯಗೆ ಬಂದಿದೆ ಬೆದರಿಕೆ ಪತ್ರ ಬಂದಿದ್ದು, ಇದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಿದ ಪ್ರತಿಪಕ್ಷ ನಾಯಕ, ವ್ಯಕ್ತಿಯೊಬ್ಬ ತನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದರು. ಇದೀಗ ಬೆದರಿಕೆ ಪತ್ರ ಬಂದಿದೆ, ದೂರು ಕೊಟ್ಟರೂ FIR ದಾಖಲಿಸಿಲ್ಲ. ಈ ಕಾರಣದಿಂದಾಗಿ ಅವರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು, ಬುದ್ಧಿಜೀವಿಗಳಿಗೆ ಬೆದರಿಕೆ ಬಗ್ಗೆಯೂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದು, ಚಿಂತಕರು, ವಿರೋಧ ಪಕ್ಷಗಳ ನಾಯಕರಿಗೆ ನಿರಂತರ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಅಸಡ್ಡೆ ತೋರದೆ, ಕಿಡಿಗೇಡಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಲಿ. ತಕ್ಷಣ ಪೊಲೀಸರಿಗೆ ಸರ್ಕಾರ ನಿರ್ದೇಶನ ನೀಡುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಅದಲ್ಲದೇ, ಆಗಂತುಕರ ಹಿಟ್ ಲಿಸ್ಟ್ ನಲ್ಲಿರುವ ಸಾಹಿತಿಗಳು, ಚಿಂತಕರಿಗೆ ಪದೇ ಪದೆ ಬೆದರಿಕೆ ಪತ್ರ ಕಳಿಸಿರುವ ಕಿರಾತಕರು. ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ, ವಸುಂಧರ ಭೂಪತಿಯವರಿಗೆ ಒಂದೊಂದು ಪತ್ರ ಬರೆದಿದ್ದಾರೆ.
ಸರ್ಕಾರ ಸುಮ್ಮನಿದೆಯೆಂದರೆ ಭಿನ್ನ ಧ್ವನಿಗಳನ್ನು ದಮನಿಸಲು ಪ್ರಯತ್ನಿಸುತ್ತಿದೆ ಎಂದರ್ಥ ಕೊಲೆಗಾರರಲ್ಲಿ ಬಹುತೇಕರು ಬಿಜೆಪಿಯನ್ನು ಬೆಂಬಲಿಸುವವರು ಇದ್ದಾರೆ. ರಾಜ್ಯದಲ್ಲಿ ಪದೇ ಪದೆ ಕಾನೂನು ಸುವ್ಯವಸ್ಥೆ ಕುಸಿದು ಬೀಳುತ್ತಿದೆ. ಸರ್ಕಾರ ಕ್ರಿಯಾಶೀಲವಾಗಬೇಕು, ದುರುಳರಿಗೆ ಶಿಕ್ಷೆ ಆಗಬೇಕು. ಪ್ರಜಾತಾಂತ್ರಿಕ ಮೌಲ್ಯಗಳನ್ನು ರಕ್ಷಿಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.