Thursday, December 26, 2024

ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಸಾವು

ಬೆಂಗಳೂರು : ಚಾಕು ಇರಿತದಿಂದ ಗಾಯಗೊಂಡಿದ್ದ ಬೆಂಗಳೂರಿನ ಟಿಪ್ಪುನಗರ ವಾರ್ಡ್​ನ ಮಾಜಿ ಕಾರ್ಪೊರೇಟರ್ ನಜೀಮಾ ಅವರ ಪತಿ ಆಯೂಬ್​​​ ಖಾನ್ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟರು.

ನಿನ್ನೆಯಷ್ಟೇ ಆಯೂಬ್​ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಯೂಬ್​​ ಹೊಟ್ಟೆಯ ಭಾಗದಲ್ಲಿ ತೀವ್ರ ರಕ್ತಸ್ರಾವ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸಲಾಯಿತು. ಆಸ್ತಿ ವಿಚಾರವಾಗಿ ಆಯೂಬ್​ ಖಾನ್​ ಅಣ್ಣನ ಮಕ್ಕಳಿಂದ ಅಪರಾಧ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಆಯೂಬ್ ಹೊಟ್ಟೆಯ ಭಾಗಕ್ಕೆ ದುಷ್ಕರ್ಮಿಗಳು ಇರಿದಿದ್ದರು. ಆರೋಪಿಗಳಿಗಾಗಿ ಚಾಮರಾಜಪೇಟೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಮೇಲ್ನೋಟಕ್ಕೆ ಆಸ್ತಿ ವಿವಾದವೇ ಜಗಳಕ್ಕೆ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ರಕ್ತದ ಮಡುವಿನಲ್ಲಿದ್ದ ಅಯೂಬ್​ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನು, ಚಾಕು ಇರಿತದಿಂದ ಮೃತಪಟ್ಟ ಆಯೂಬ್​​​ ಖಾನ್ ಕೊಲೆಗೆ ಸಂಬಂಧಿಸಿಂತೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪತ್ನಿ ನಜೀಮಾ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

RELATED ARTICLES

Related Articles

TRENDING ARTICLES