Sunday, December 29, 2024

ಕಿಕ್ ಬಾಕ್ಸಿಂಗ್ ಕಿಕ್‌ ತಂದ ಸಾವು

ಬೆಂಗಳೂರು : ರಿಂಗ್‌ನಲ್ಲಿ ಸೆಣೆಸಾಡುತ್ತಿದ್ದಂತೆ ಎದುರಾಳಿ ಏಟಿಗೆ ಸಾವನ್ನಪ್ಪಿದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ.

ಕಿಕ್ ಬಾಕ್ಸಿಂಗ್ನಲ್ಲಿ ಪಾಲ್ಗೊಂಡಿದ್ದ ಮೈಸೂರು ಯುವಕ‌ ನಿಖಿಲ್ (24) ಸಾವನ್ನಪ್ಪಿದ್ದಾನೆ. ರಿಂಗ್‌ನಲ್ಲಿ ಸೆಣೆಸಾಡುತ್ತಿದ್ದಂತೆ ಎದುರಾಳಿ ಒಂದೇ ಏಟಿಗೆ ಸಾವನ್ನಪ್ಪಿದ್ದಾನೆ. ನಿಖಿಲ್ ಕೆಳಗೆ ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

K 1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಆಯೋಜನೆಗೊಂಡಿದ್ದ ಸ್ಪರ್ಧೆಯಲ್ಲಿ ಬೆಂಗಳೂರಿನ ಕೆಂಗೇರಿಯಲ್ಲಿ ನಡೆಯುತ್ತಿದ್ದ ಸ್ಪರ್ಧೆಯಲ್ಲಿ ಎದುರಾಳಿ ತಲೆಗೆ ಹೊಡೆದ ಒಂದೇ ಏಟಿಗೆ ಬಾಕ್ಸಿಂಗ್ ರಿಂಗ್ ನಲ್ಲಿ ಕೆಳಗೆ ಬಿದ್ದ ನಿಖಿಲ್​​ನನ್ನು ತಕ್ಷಣ ಬೆಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ದಿನಗಳ ಕಾಲ‌ ಕೋಮಾದಲ್ಲಿದ್ದ ನಿಖಿಲ್. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.

RELATED ARTICLES

Related Articles

TRENDING ARTICLES