ಬೆಂಗಳೂರು : 1 ರಿಂದ 12ನೇ ತರಗತಿ ವರೆಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸೂಚಿಸಲಾಗಿದೆ.
ರಾಷ್ಟ್ರೀಯ ಶಿಕ್ಷಣ ನೀತಿ ಸೂಚನೆ ಮೇರೆಗೆ ಪ್ರಸ್ತಾವನೆ ಮೆರೆಗೆ 1ನೇ ಭಾಷೆ ಕನ್ನಡ, 2ನೇ ಭಾಷೆ ಇಂಗ್ಲಿಷ್, 3ನೇ ಭಾಷೆ ಐಚ್ಛಿಕ ಭಾಷೆ ಕಲಿಕೆಗೆ ಅವಕಾಶ ನೀಡುವಂತೆ ಪ್ರಸ್ತಾವನೆ ಮಾಡಲಾಗಿದ್ದು, 1-12ನೇ ತರಗತಿವರೆಗಿನ ಮಕ್ಕಳಿಗೆ ಪ್ರಥಮ ಕನ್ನಡ ಭಾಷೆಯಲ್ಲಿ ಕಲಿಕೆ ಕಡ್ಡಾಯಗೊಳಿಸಬೇಕು. 2ನೇ ಭಾಷೆಯಾಗಿ ಇಂಗ್ಲಿಷ್ & ತೃತೀಯ ಭಾಷೆಯಾಗಿ ಯಾವುದಾದರೊಂದು ಭಾಷೆ ಕಲಿಸಬೇಕು. ಮೂರನೇ ಭಾಷೆಯಾಗಿ ಸಂಸ್ಕೃತಕ್ಕೆ ಆದ್ಯತೆ ನೀಡಬೇಕೆಂದು ಪ್ರಸ್ತಾಪಿಸಿದ್ದಾರೆ.
ಇನ್ನು, ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಪ್ರಸ್ತಾವನೆ ಮಾಡಿದ್ದು, ರಾಜ್ಯ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚಿಸಿತ್ತು. ಈ ಕಾರ್ಯಪಡೆಯು 26 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಮಿತಿ ರಚಿಸಿ, ಆ ಸಮಿತಿಗಳಿಂದ ವರದಿ ಪಡೆದಿತ್ತು. ಅದನ್ನು ಆಧರಿಸಿ ತಾನು ಸಿದ್ಧಪಡಿಸಿದ ವರದಿಯನ್ನ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಕಾರ್ಯಪಡೆ ಸಲ್ಲಿಕೆ ಮಾಡಿತ್ತು. ಹೀಗಾಗಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಈ ವರದಿ ರವಾನೆಯಾಗಿದೆ.