Wednesday, January 22, 2025

RSS ಕುರಿತು ದೇವನೂರ ಬರೆದಿರೋದು ಸತ್ಯ : ಆರ್. ಧ್ರುವನಾರಾಯಣ್​​

ಮೈಸೂರು: ‘ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಪಕ್ಷದಲ್ಲಿ ಯಾರಿಂದಲೂ ಆಕ್ಷೇಪ ವ್ಯಕ್ತವಾಗಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಚರಣಾ ಸಮಿತಿಯ ಉಪಾಧ್ಯಕ್ಷರಾಗಿ ಸಂಸದ ಡಿ.ಕೆ. ಸುರೇಶ್ ಅವರೇ ಇದ್ದಾರೆ. ಆರ್‌.ವಿ. ದೇಶಪಾಂಡೆ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಎಲ್ಲರನ್ನೂ ಒಳಗೊಳಿಸಿಕೊಂಡೇ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಇನ್ನು ಸಿದ್ದರಾಮೋತ್ಸವಕ್ಕೆ, ಪಕ್ಷದ ವರಿಷ್ಠ ರಾಹುಲ್‌ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಬಿಂಬಿಸುವ ಕಾರ್ಯಕ್ರಮವಿದು.

ಅಷ್ಟೆಅಲ್ಲದೇ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮಿತಿ ಮೀರಿದೆ. ಆದ್ದರಿಂದ ಬಿಜೆಪಿ ಪಾಠ ಕಲಿಸಲು ಜನರು ನಿರ್ಧರಿಸಿದ್ದಾರೆ. ಯಾವಾಗ ಚುನಾವಣೆ ನಡೆದರೂ ನಮಗೆ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಮುಗಿದ ಬಳಿಕವಷ್ಟೆ ಮುಖ್ಯಮಂತ್ರಿ ಸ್ಥಾನದ ಚರ್ಚೆ ಬರುತ್ತದೆ. ಪಕ್ಷ ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಮೊದಲ ಗುರಿ ಎಂದು ಪ್ರತಿಕ್ರಿಯಿಸಿದರು.

ಇನ್ನು ಇದೇ ವೇಳೆ ‘ಆರ್‌ಎಸ್‌ಎಸ್ ಆಳ ಮತ್ತು ಅಗಲ ಕೃತಿಯಲ್ಲಿ ದೇವನೂರ ಮಹಾದೇವ ಅವರು ವಾಸ್ತವಾಂಶ ಬಿಚ್ಚಿಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಆದರೆ, ದೇವನೂರು ಸತ್ಯ ಬರೆದಿದ್ದಾರೆ’ ಎಂದರು.

RELATED ARTICLES

Related Articles

TRENDING ARTICLES