Monday, December 23, 2024

ನನ್ನ ಹುಟ್ಟುಹಬ್ಬ ಆಚರಿಸಿದ್ರೆ ಬಿಜೆಪಿಗೆ ಯಾಕೆ ಭಯ? : ಸಿದ್ದರಾಮಯ್ಯ

ಕಲಬುರಗಿ: ನನ್ನ ಸ್ನೇಹಿತರು, ಬೆಂಬಲಿಗರು ನನ್ನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ನನ್ನ ಹುಟ್ಟುಹಬ್ಬ ಆಚರಣೆಗೆ ಬೆಂಬಲಿಗರು ಮುಂದಾದರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಅದಕ್ಕಾಗಿಯೇ ನನ್ನ ಜನ್ಮದಿನದ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಸಹ 75ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆಗ ನಾನು ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋಗಿ ವಿಶ್ ಮಾಡಿ ಬಂದಿದ್ದೆ. ಸಿದ್ದರಾಮೋತ್ಸವ ಎಂದು ಕರೆದಿದ್ದೇ ನೀವು ಮಾಧ್ಯಮದವರು. ಅದು ಸಿದ್ದರಾಮೋತ್ಸವ ಅಲ್ಲ. ಸಿದ್ದರಾಮಯ್ಯನವರ 75ನೇ ಅಮೃತ ಉತ್ಸವ ಅಷ್ಟೇ ಎಂದು ಹೇಳಿದರು.

ಇನ್ನು ನನ್ನ ಹುಟ್ಟುಹಬ್ಬ ಆಚರಣೆ ಬಗ್ಗೆ ನಮ್ಮ ಪಕ್ಷದಲ್ಲಿ ಯಾರಿಗೂ ನಡುಕ ಇಲ್ಲ. ನಮ್ಮವರಲ್ಲಿ ಯಾಕೆ ನಡುಕ ಇರುತ್ತೆ, ಇದೆಲ್ಲಾ ಸುಳ್ಳು ಎಂದಿದ್ದಾರೆ.

ಇದೇ ವೇಳೆ RSS ಆಳ ಮತ್ತು ಅಗಲ ಕೃತಿ ಬಗ್ಗೆ ಪ್ರತಿಕ್ರಿಯಿಸಿ, ದೇವನೂರು ಮಹಾದೇವ ಅವರು ಸಾವರ್ಕರ್, ಹೆಡಗೇವಾರು, ಆರ್‌ಎಸ್‌ಎಸ್‌ನವರು ಯಾವ ಕಾಲದಲ್ಲಿ ಏನೆಲ್ಲ ಹೇಳಿದ್ದಾರೋ ಅದನ್ನೇ ಅವರು ಬರೆದಿದ್ದಾರೆ. ಆದ್ರೆ ಸತ್ಯ ಹೇಳಲು ಬಂದವರ ಮೇಲೆ ಆರೋಪ ಮಾಡೋದು, ಕೇಸ್ ಹಾಕೋದನ್ನು ಬಿಜೆಪಿಯವರು ಮಾಡುತ್ತಾರೆ. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಮೂಲಭೂತ ಹಕ್ಕಿಗೆ ನಿರ್ಬಂಧ ಹೇರಲು ಇವರು ಯಾರು ಎಂದು ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES