Thursday, January 23, 2025

ಅಶ್ವಥ್ ನಾರಾಯಣ ಕಡುಬು, ಕಳ್ಳೆಪುರಿ ತಿಂತಿದ್ನಾ? : ಸಿದ್ದರಾಮಯ್ಯ ಪ್ರಶ್ನೆ

ಕಲಬುರಗಿ: ಪಿಎಸ್ ಐ ಹಗರಣದಲ್ಲಿ ಅಧಿಕಾರಿಗಳನ್ನು ಬಂಧಿಸಿದರೆ ಸಾಲದು ಅವರಿಗೆ ಮಂಪರು ಪರೀಕ್ಷೆ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣದಲ್ಲಿ ಸರ್ಕಾರ ಅಧಿಕಾರಿಗಳನ್ನು ಬಂಧಿಸಿದರೆ ಸಾಲದು, ಅಮೃತ್ ಪಾಲ್, ಶಾಂತಕುಮಾರ್ ಅವರಿಗೆ ಮಂಪರು ಪರೀಕ್ಷೆ ನಡೆಸಲಿ, ಪ್ರಕರಣದಲ್ಲಿ ಭಾಗಿಯಾದವರ ಹೆಸರು ಹೇಳದಂತೆ ಅಧಿಕಾರಿಗಳಿಗೆ ಒತ್ತಡ ಹೇರಲಾಗುತ್ತಿದೆ. ಹೀಗಾಗಿ ಅಧಿಕಾರಿಗಳಿಗೆ ಮಂಪರು ಪರೀಕ್ಷೆ ಮಾಡಬೇಕು ಎಂದರು.

ಇನ್ನು, ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗಲೂ ಪಿಎಸ್ ಐ ಹಗರಣ ನಡೆದಿತ್ತು ಎಂಬ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿಯಾಗಿದ್ದಾಗ ಹಗರಣ ನಡೆದಿದ್ದರೆ, ಆಗ ವಿರೋಧಪಕ್ಷದಲ್ಲಿದ್ದ ಅಶ್ವಥ್ ನಾರಾಯಣ ಕಡುಬು ತಿಂತಿದ್ನಾ ಇಲ್ಲ ಕಳ್ಳೆಪುರಿ ತಿಂತಿದ್ನಾ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES