Tuesday, December 24, 2024

ಹಾಸನ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ

ಹಾಸನ : ಜಿಲ್ಲೆಯ ಹಲವೆಡೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಸಕಲೇಶಪುರ, ಆಲೂರು, ಅರಕಲಗೂಡು, ಬೇಲೂರಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಇಂದು ಆಲೂರು, ಸಕಲೇಶಪುರ, ಅರಕಲಗೂಡು,ಬೇಲೂರು ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಹೇಮಾವತಿ ಜಲಾಶಯಕ್ಕೆ 41420 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 38000 ಕ್ಯೂಸೆಕ್ ನೀರು ಹೊರಹರಿವು ಇದೆ. ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿಯಾಗಿದ್ದು, ಇಂದು ಜಲಾಶಯದಲ್ಲಿನ ನೀರಿನ ಮಟ್ಟ 2920.40 ಅಡಿ ಆಗಿದೆ. ಜಲಾಶಯದ ನೀರಿನ ‌ಸಂಗ್ರಹ ಪ್ರಮಾಣ 37.103 ಟಿಎಂಸಿ ಇತ್ತು ಆದರೆ ಇಂದು ಜಲಾಶಯದಲ್ಲಿರುವ ನೀರಿನ ಪ್ರಮಾಣ 35.557 ಟಿಎಂಸಿ ಜಾಸ್ತಿಯಾಗಿದೆ.

RELATED ARTICLES

Related Articles

TRENDING ARTICLES