Wednesday, January 22, 2025

ಸುಶ್ಮಿತಾ ಸೇನ್‌ ಜೊತೆ ಲಲಿತ್ ಮೋದಿ ಡೇಟಿಂಗ್

ತನ್ನ ಮಾಜಿ ಗೆಳೆಯ ರೋಹ್ಮನ್ ಶಾಲ್ ಜೊತೆಗಿನ ಬ್ರೇಕ್ ಅಪ್ ನಂತರ, ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರು ಲಲಿತ್ ಮೋದಿಯನ್ನು ಮದುವೆಯಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಆದರೆ ಈ ಈ ಸುದ್ದಿ ಎಲ್ಲೆಡೆ ಹಬ್ಬಲು ಆರಂಭಿಸಿದಂತೆ ಮತ್ತೊಂದು ಟ್ವೀಟ್ ಮಾಡುವ ಮೂಲಕ ಮೋದಿ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಅವರು ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. ಐಪಿಎಲ್ ಪಂದ್ಯಾವಳಿಯ ಮೊದಲ ಅಧ್ಯಕ್ಷ ಮತ್ತು ಕಮಿಷನರ್ ಆಗಿದ್ದ ಮೋದಿ ಅವರು ಗುರುವಾರ ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಸರಣಿ ಚಿತ್ರಗಳೊಂದಿಗೆ ಹಂಚಿಕೊಂಡಿದ್ದಾರೆ.

ತನ್ನ ಮಾಜಿ ಗೆಳೆಯ ರೋಹ್ಮನ್ ಶಾಲ್ ಜೊತೆಗಿನ ಬ್ರೇಕ್ ಅಪ್ ನಂತರ, ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರು ಲಲಿತ್ ಮೋದಿಯನ್ನು ಮದುವೆಯಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಆದರೆ ಈ ಈ ಸುದ್ದಿ ಎಲ್ಲೆಡೆ ಹಬ್ಬಲು ಆರಂಭಿಸಿದಂತೆ ಮತ್ತೊಂದು ಟ್ವೀಟ್ ಮಾಡುವ ಮೂಲಕ ಮೋದಿ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ. ಎರಡನೇ ಟ್ವೀಟ್ ಮಾಡಿರುವ ಮೋದಿ ಅದರಲ್ಲಿ ನಾವು ಪರಸ್ಪರ ಡೇಟಿಂಗ್ ಮಾಡುತ್ತಿರುವುದು ನಿಜ ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES