Monday, December 23, 2024

ಇಂದು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಬಂದ್ ?

ಬೆಂಗಳೂರು : ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದ್ದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಬಂದ್ ಮಾಡಲಾಗಿದೆ.

ಇಂದು ತರಗತಿ ಬಹಿಷ್ಕರಿಸಿ ಬಂದ್ ಗೆ ಮುಂದಾಗಿದ್ದ ವಿದ್ಯಾರ್ಥಿನಿಯರು. NSUI ವಿದ್ಯಾರ್ಥಿ ಸಂಘಟನೆಯಿಂದ ವಿದ್ಯಾರ್ಥಿನಿಯರಿಂದ ಬಂದ್​​ಗೆ ಕರೆ ನೀಡಿದ್ದಾರೆ. ಆದ್ರೆ ವಿದ್ಯಾರ್ಥಿನಿಯರಿಗೆ ಬೆದರಿಸಿ ತರಗತಿಗೆ ಹಾಜರಾಗುವಂತೆ ಒತ್ತಡ ಹೇರಿದ್ದಾರೆ.

ಅದಲ್ಲದೇ, ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಇಂಟರ್ನಲ್ಸ್ ಕಡಿತಗೊಳಿಸೊ ಬೆದರಿಕೆ ನೀಡಿದ್ದಾರೆ. ಕಳೆದ 2 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿನಿಯರು. ಬಿಕಾಂ, ಬಿಬಿಎ ಹಾಗೂ ಬಿಎ ವಿದ್ಯಾರ್ಥಿನಿಯರಿಂದ ಶುಲ್ಕ ಕಡಿತಕ್ಕೆ ಆಗ್ರಹಿಸಿದ್ದಾರೆ. ಏಕಾಏಕಿ 5 ಸಾವಿರದಿಂದ 13 ಸಾವಿರಕ್ಕೆ ಆಡಳಿತ ಮಂಡಳಿ ಶುಲ್ಕ ಏರಿಸಿದ್ದಾರೆ.

RELATED ARTICLES

Related Articles

TRENDING ARTICLES