ಹುಬ್ಬಳ್ಳಿ : ರಾಜ್ಯದಲ್ಲಿ ನೆರೆಯಿಂದ ಭಾರಿ ಹಾನಿ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಒಂದೆರಡು ದಿನದಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಕೆಯಾಗಿದ್ದು, ಉತ್ತರ ಕರ್ನಾಟಕ ಭಾಗದ ಪ್ರವಾಹ ಪರಿಸ್ಥಿತಿ ಬಗ್ಗೆ ವರದಿ ತರಸಿಕೊಂಡಿದ್ದೇನೆ. ನದಿ ಪಾತ್ರದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಮಹಾರಾಷ್ಟ್ರದ ಅಧಿಕಾರಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಅಲ್ಲಿನ ಡ್ಯಾಮ್ ಲೇವಲ್ ಗಳ ಬಗ್ಗೆ ನಿರಂತರ ನಿಗಾ ವಹಿಸಲಾಗಿದೆ ಎಂದರು.
ಇನ್ನು, ಮನೆ ಬಿದ್ದವರಿಗೆ ತಕ್ಷಣ ಕೂಡಲೇ 10 ಸಾವಿರ, ಬಳಿಕ 95 ಸಾವಿರ ಕೊಡಲು ತೀರ್ಮಾನ ಮಾಡಲಾಗಿದ್ದು, ಪೂರ್ಣ ಪ್ರಮಾಣದ ಮನೆಗಳಿಗೆ ಮೊದಲು 20 ಸಾವಿರ, ನಂತರ ಐದು ಲಕ್ಷ ನೀಡಲು ತೀರ್ಮಾನಿಸಲಾಗಿದೆ. ಬೆಳೆ ಹಾನಿ ಜಂಟಿ ಸರ್ವೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ. ಕೇಂದ್ರ ಸರ್ಕಾರದ ಪರಿಹಾರದ ಜೊತೆ ರಾಜ್ಯದ ಪರಿಹಾರ ಸೇರಿಸಿ ನೀಡಲಾಗುವುದು ಎಂದು ಹುಬ್ಬಳ್ಳಿಯಲ್ಲಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.