ಬೆಂಗಳೂರು : ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಮಳೆ ಹಾಗೂ ಮೋಡಕವಿದ ವಾತಾವರಣ ಇರಲಿದೆ. ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಮುಂದುವರಿದಿದೆ.
ಬೆಂಗಳೂರು, ಮಂಗಳೂರು, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಳ್ಳಾರಿಯಲ್ಲಿ ಬಿಸಿಲು ಹಾಗೂ ಮೊಡಕವಿದ ವಾತಾವರಣ ಇರಲಿದೆ. ಮೈಸೂರು, ಕೊಡಗು, ರಾಮನಗರ, ಹಾಸನ, ಚಾಮರಾಜನಗರ, ಉಡುಪಿ, ಕಾರವಾರ, ಚಿಕ್ಕಮಗಳೂರು, ಹಾವೇರಿ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲುಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಲ್ಲದೆ ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಬೇಲೂರು ತಾಲ್ಲೂಕಿನಲ್ಲಿರುವ ವಾಟೆಹೊಳೆ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.ಮಲೆನಾಡು ಮತ್ತು ಕಾರವಾರ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಕುಮುದ್ವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಸ್ಥಳೀಯರಲ್ಲಿ ಪ್ರವಾಹದ ಭೀತಿ ಉಂಟಾಗಿದೆ.ಇನ್ನೂ ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿಯೂ ವರುಣ ಅಬ್ಬರಿಸುತ್ತಿದ್ದು, ವರದಾ ನದಿ ಪ್ರವಾಹ ದಿಂದ ಅಡಿಕೆ, ಅನಾನಸ್ ತೋಟ, ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಬನವಾಸಿ ಭಾಗದಲ್ಲೂ ಪ್ರವಾಹ ಭೀತಿ ಹೆಚ್ಚಾಗಿದೆ.