Monday, November 25, 2024

ವಿಚಾರಣೆಗೆ ಬರಲು ಜಮೀರ್​​ಗೆ ACB ನೋಟಿಸ್‌

ಬೆಂಗಳೂರು : ಅಕ್ರಮ ಆಸ್ತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರಿಗೆ ACB ನಿನ್ನೆ ನೋಟಿಸ್‌ ಜಾರಿಗೊಳಿಸಿದೆ. ಈ ನೋಟಿಸ್‌ ತಲುಪಿದ 10 ದಿನಗಳೊಳಗೆ ತನಿಖಾಧಿಕಾರಿ ಮುಂದೆ ತಮ್ಮ ಮೇಲಿನ ಆರೋಪಗಳಿಗೆ ಪೂರಕವಾದ ದಾಖಲೆ ಸಮೇತ ಹಾಜರಾಗಿ ಹೇಳಿಕೆ ದಾಖಲಿಸಬೇಕು ಎಂದು ಜಮೀರ್​ಗೆ ACB ಸೂಚಿಸಿದೆ. ಹೀಗಾಗಿ ಸೋಮವಾರ ಅಥವಾ ಮಂಗಳವಾರ ACB ಮುಂದೆ ಜಮೀರ್‌ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಜಾರಿ ನಿರ್ದೇಶನಾಲಯದ ವರದಿ ಹಿನ್ನೆಲೆ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ACB, ಜು.6ರಂದು ಜಮೀರ್‌ ಅವರ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ ಹಾಗೂ ಅತಿಥಿ ಗೃಹ ಸೇರಿ 5 ಸ್ಥಳಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿತ್ತು. ಈ ದಾಳಿ ವೇಳೆ ಮನೆಯಲ್ಲಿದ್ದ ಜಮೀರ್‌ ಅವರು, ತಮ್ಮ ಆಸ್ತಿ-ಪಾಸ್ತಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಿವರಣೆ ನೀಡಿದ್ದರು. ಆಗ ಅಧಿಕಾರಿಗಳು, ಜು.8ರಂದು ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಿದ್ದರು.

RELATED ARTICLES

Related Articles

TRENDING ARTICLES