Thursday, January 23, 2025

ಕೇರಳ ಸರ್ಕಾರಕ್ಕೆ WHO ಎಚ್ಚರಿಕೆ ಗಂಟೆ

ಕೇರಳ: ಎರಡು ದಿನಗಳ ಹಿಂದೆ ಕೇರಳದಲ್ಲಿಯೇ ದೇಶದ ಮೊಟ್ಟಮೊದಲ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿತ್ತು. ಇದರ ಬೆನ್ನಲ್ಲಿಯೇ ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿತ್ತು. ಈಗ ಕಣ್ಣೂರಿನಲ್ಲಿ 2ನೇ ಅಧಿಕೃತ ಪ್ರಕರಣದ ಪತ್ತೆಯಾಗಿದೆ.

ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ವೈರಸ್ ಪ್ರಕರಣ ವರದಿಯಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಮಂಕಿಪಾಕ್ಸ್ ಹರಡುವುದನ್ನು ತಡೆಗಟ್ಟಲು ಕೇರಳ ಸರ್ಕಾರವು ಎಚ್ಚರಿಕೆಯನ್ನು ಇನ್ನಷ್ಟು ಹೆಚ್ಚಿಸಿದೆ, ದಕ್ಷಿಣದ ರಾಜ್ಯವು ದೇಶದ ಮೊದಲ ಅಪರೂಪದ ವೈರಸ್ ಸೋಂಕಿನ ಪ್ರಕರಣವನ್ನು ವರದಿ ಮಾಡಿದ ಒಂದು ದಿನದ ನಂತರ ಐದು ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆಗಳನ್ನು ನೀಡಿದೆ. ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾರ್ಜ್, ಶಾರ್ಜಾ-ತಿರುವನಂತಪುರಂ ಇಂಡಿಗೋ ವಿಮಾನದಲ್ಲಿ ಸೋಂಕಿತ ವ್ಯಕ್ತಿಯ ಸಹಪ್ರಯಾಣಿಕರು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ ಮತ್ತು ಕೊಟ್ಟಾಯಂನಿಂದ ಬಂದಿದ್ದರಿಂದ ಐದು ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು. ಈ ವಿಮಾನ ಜುಲೈ 12 ರಂದು ಕೇರಳಕ್ಕೆ ಬಂದಿತ್ತು.ಚಿಕನ್ ಗುನ್ಯಾ ಅಥವಾ ಅಂತಹುದೇ ರೋಗಲಕ್ಷಣಗಳನ್ನು ಹೊಂದಿರುವವರನ್ನು ಆರೋಗ್ಯ ಇಲಾಖೆ ಗಮನಿಸುತ್ತಿದೆ, ಅವರಿಗೆ ಮಂಕಿಪಾಕ್ಸ್‌ ಇಲ್ಲ ಎಂದು ಖಚಿತಪಡಿಸಿಕೊಳ್ಳುತ್ತಿದೆ ಎಂದು ಸಚಿವರು ಹೇಳಿದರು. ದುಬೈನಿಂದ ಬಂದಿದ್ದ 31 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ವೈರಸ್‌ ಪತ್ತೆಯಾಗಿದೆ. ಇತ್ತೀಚೆಗ ಆತ ದುಬೈನಿಂದ ಕೇರಳಕ್ಕೆ ಹಿಂತಿರುಗಿದ್ದ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ.

ಬೇರೆ ಯಾರಾದರೂ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ರಾಂಡಮ್‌ ಮಾದರಿಗಳನ್ನು ಪರೀಕ್ಷಿಸಲಾಗುವುದು ಎಂದು ಅವರು ಹೇಳಿದರು. “ವಿಮಾನ ನಿಲ್ದಾಣದಲ್ಲಿ ಕಣ್ಗಾವಲು ತೀವ್ರಗೊಳಿಸಲಾಗಿದೆ, ಅದರ ಭಾಗವಾಗಿ, ಆರೋಗ್ಯ ಇಲಾಖೆಯು ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತದೆ. ಯಾರಿಗಾದರೂ ರೋಗಲಕ್ಷಣಗಳು ಕಂಡುಬಂದರೆ, ಅವರನ್ನು ಪ್ರತ್ಯೇಕಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ, ‘ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಕಿಪಾಕ್ಸ್‌ ತಡೆಗೆ ಸಮಗ್ರ ರೀತಿಯಲ್ಲಿ ತರಬೇತಿ ನೀಡಲಾಗುತ್ತಿದ್ದು, ಇದುವರೆಗೆ 1,200 ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ ಎಂದರು.

31 ವರ್ಷದ ವ್ಯಕ್ತಿಯಲ್ಲಿ ವೈರಸ್‌ ಪತ್ತೆಯಾಗಿರುವ ಕಾರಣ, ಅವರಿಗೆ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಯು ಮೇ 13 ರಂದು ಕಣ್ಣೂರಿಗೆ ಮರಳಿದ್ದರು ಮತ್ತು ನಂತರ ರೋಗಲಕ್ಷಣಗಳು ಕಾಣಿಸಿಕೊಂಡವು. 31 ವರ್ಷದ ರೋಗಿಯ ಎಲ್ಲಾ ನಿಕಟ ಸಂಪರ್ಕಗಳನ್ನು ಪತ್ತೆ ಹಚ್ಚಿ ನಿಗಾವಹಿಸಲಾಗುತ್ತಿದೆ. ಜುಲೈ 14 ರಂದು ಕೊಲ್ಲಂ ಜಿಲ್ಲೆಯಲ್ಲಿ ಭಾರತದ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿತ್ತು.

ಮೊದಲ ಪ್ರಕರಣ ಪತ್ತೆಯಾದಾಗ, ಕೇಂದ್ರ ಆರೋಗ್ಯ ಸಚಿವಾಲಯವು ಮಂಕಿಪಾಕ್ಸ್‌ಅನ್ನು ನಿರ್ವಹಿಸುವ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತು. ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಅಂತರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು, ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳು ಮತ್ತು ಇತರರೊಂದಿಗೆ ಸಂಪರ್ಕವನ್ನು ತಪ್ಪಿಸಬೇಕು. ಇನ್ನು, ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೋಸಿಸ್ ಅಂದ್ರೆ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್ ಆಗಿದೆ. ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನೇ ಹೋಲುತ್ತದೆ, ಆದರೂ ಇದು ಪ್ರಾಯೋಗಿಕವಾಗಿ ಇದರ ತೀವ್ರತೆ ಕಡಿಮೆ ಎನ್ನಲಾಗ್ತಿದೆ.

ಬ್ಯೂರೋ ರಿಪೋರ್ಟ್‌ ಪವರ್‌ ಟಿವಿ

RELATED ARTICLES

Related Articles

TRENDING ARTICLES