Monday, December 23, 2024

ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಬಾಂಬ್ ಬೆದರಿಕೆ: ತಂದೆ ಲ್ಯಾಪ್‌ಟಾಪ್‌ನಿಂದ ಮೇಲ್

ಬೆಂಗಳೂರು: ರಾಜರಾಜೇಶ್ವರಿನಗರದ ನ್ಯಾಷನಲ್‌ ಹಿಲ್‌ವ್ಯೂ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಹಾಕಿದ್ದು, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

‘ಇದೇ ಜುಲೈ 21ರಂದು ಪರೀಕ್ಷೆಗಳು ನಿಗದಿ ಆಗಿದ್ದವು. ಆದರೆ, ವಿದ್ಯಾರ್ಥಿ ಹೆಚ್ಚು ಓದಿರಲಿಲ್ಲ. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯವಿತ್ತು. ಪರೀಕ್ಷೆ ಮುಂದೂಡುವ ಉದ್ದೇಶದಿಂದ ಬಾಂಬ್ ಬೆದರಿಕೆ ಕಳುಹಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ತಂದೆಯ ಲ್ಯಾಪ್‌ಟಾಪ್‌ನಲ್ಲಿ ಹುಚ್ಚ ವೆಂಕಟ್ ಹೆಸರಿನಲ್ಲಿ ಇ-ಮೇಲ್ ಸೃಷ್ಟಿಸಿದ್ದ ಬಾಲಕ, ಅದೇ ಇ-ಮೇಲ್‌ನಿಂದ ಶಾಲೆ ಇ-ಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿದ್ದ. ಶಾಲೆ ಕ್ಯಾಂಪಸ್‌ನಲ್ಲಿ ಬಾಂಬ್ ಸ್ಫೋಟಗೊಳ್ಳುವುದಾಗಿ ಬೆದರಿಸಿದ್ದ’ ಎಂದೂ ಮೂಲಗಳು ತಿಳಿಸಿವೆ.

‘ಸೋಮವಾರವೂ ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಬಂದಿದ್ದ. ಪೊಲೀಸರು ಶೋಧ ನಡೆಸುವಾಗಲೂ ಆತ ಕ್ಯಾಂಪಸ್‌ನಲ್ಲಿದ್ದ. ಈತ ಇ-ಮೇಲ್ ಕಳುಹಿಸಿದ್ದ ಸಂಗತಿ ಪೋಷಕರಿಗೂ ಗೊತ್ತಿರಲಿಲ್ಲ’ ಎಂದೂ ಹೇಳಿವೆ.

‘ಬಾಲಕ ಓದಿನಲ್ಲೂ ಜಾಣನಾಗಿದ್ದ. ಬಾಲನ್ಯಾಯ ಕಾಯ್ದೆ ಪ್ರಕಾರ ಬಾಲಕನ ಮೇಲೆ ಕ್ರಮ ಜರುಗಿಸಲಾಗಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES