Wednesday, January 22, 2025

KRS ಅಣೆಕಟ್ಟೆಗೆ ಸಿಎಂ ಬಾಗಿನ

ಮಂಡ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮತ್ತು ನಾಳೆ 2 ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪತ್ನಿ ಸಮೇತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ,ತಾಯಿ ಚಾಮುಂಡಿ ತಾಯಿ ಉತ್ಸವ ಮೂರ್ತಿಗೆ ಮೊದಲು ಪೂಜೆ ಸಲ್ಲಿಸಿ ದರ್ಶನ ಪಡೆದರು.

ನಂತರ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತದಿಂದ ಕೆಆರ್‌ಎಸ್‌ನಲ್ಲಿ ಹಮ್ಮಿಕೊಂಡಿರುವ ಬಾಗಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮೈಸೂರಿನಿಂದ ಕೆಆರ್‌ ಸಾಗರ ಬಳಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿದ ಮುಖ್ಯಮಂತ್ರಿಗಳು ನಂತರ ಕೃಷ್ಣರಾಜಸಾಗರ ಬಳಿಯ ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದರು.ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ ಸಚಿವ ಕೆ.ಸಿ ನಾರಾಯಣಗೌಡ, ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸಿಎಂ ಬಾಗಿನ ಕಾರ್ಯಕ್ರಮಕ್ಕೆ ಕೈ ಜೋಡಿಸಿದರು.

RELATED ARTICLES

Related Articles

TRENDING ARTICLES