Sunday, December 22, 2024

ಕೆ.ಎಸ್​​. ಈಶ್ವರಪ್ಪಗೆ ಬಿಗ್ ರಿಲೀಫ್

ಶಿವಮೊಗ್ಗ: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಟೌನ್ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಸಾಕ್ಷಾಧಾರಗಳ ಕೊರತೆಯಿಂದಾಗಿ ಉಡುಪಿ ಟೌನ್ ಪೊಲೀಸರು ಬಿ.ರಿಪೋರ್ಟ್ ಸಲ್ಲಿಕೆ ಹಾಕಿದ್ದು, ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

ಆದ್ರೆ, ಕೋರ್ಟ್ ಇನ್ನೂ ಉಡುಪಿ ಪೊಲೀಸರ ಬಿ.ರಿಪೋರ್ಟ್ ವರದಿಯನ್ನು ಅಂಗೀಕರಿಸಿಲ್ಲ. ಮುಂದಿನ ವಿಚಾರಣೆ ವೇಳೆ ಬಿ-ರಿಪೋರ್ಟ್ ಬಗ್ಗೆ ದೂರುದಾರರಿಗೆ ಮಾಹಿತಿ ನೀಡಲಾಗುತ್ತೆ. ಆಗ ದೂರುದಾರರು ಬಿ ರಿಪೋರ್ಟ್‌ಅನ್ನು ಚಾಲೆಂಜ್ ಮಾಡಬಹುದು. ಇದರಿಂದ ಈಶ್ವರಪ್ಪಗೆ ಮೊದಲ ಹಂತದ ರಿಲೀಸ್ ಅಂತ ಹೇಳಬಹುದು.

ಈಶ್ವರಪ್ಪ ಅವರೇ ಆತ್ಮಹತ್ಯೆಗೆ ಕಾರಣ ಅನ್ನೋದಕ್ಕೆ ಸಾಕ್ಷ್ಯ ಸಿಕ್ಕಿಲ್ಲ. ಸಾಕ್ಷ್ಯಗಳ ಕೊರತೆ ಹಿನ್ನೆಲೆಯಲ್ಲಿ ಬಿ.ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ ಎಂದು ಉಡುಪಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಇದೀಗ ಉಡುಪಿ ಪೊಲೀಸರು ಬಿ ರಿಪೋರ್ಟ್ ಹಾಕಿದ್ದು, ಈಶ್ವರಪ್ಪ ನಿಟ್ಟುಸಿರು ಬಿಡುವಂತಾಗಿದೆ. ಅಲ್ಲದೇ ಅವರು ಮತ್ತೆ ಮಂತ್ರಿಯಾಗ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

RELATED ARTICLES

Related Articles

TRENDING ARTICLES