Monday, December 23, 2024

ದುರಹಂಕಾರಿ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ: ರಾಹುಲ್ ಗಾಂಧಿ

ನವದೆಹಲಿ: ದುರಹಂಕಾರಿ ಹಾಗೂ ಸರ್ವಾಧಿಕಾರಿ ಸರ್ಕಾರದ ಧೋರಣೆಯ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು , ಜಿಎಸ್‌ಟಿ ವಿಷಯದಲ್ಲಿ ಚರ್ಚೆ ಮಾಡಿ ಎಂದು ಮನವಿ ಮಾಡಿದಾಗ ಸದನ ಮುಂದೂಡಲಾಗುತ್ತದೆ. ಬೆಲೆ ಏರಿಕೆ ಬಗ್ಗೆ ಚರ್ಚಿಸಲು ಹೇಳಿದಾಗ ಕಲಾಪ ಮುಂದೂಡಲಾಗುತ್ತದೆ. ಅಗ್ನಿಪಥ್​​ ಯೋಜನೆ ಬಗ್ಗೆ ಚರ್ಚಿಸಲು ತಿಳಿಸಿದಾಗ ಸದನ ಮುಂದೂಡಲಾಗುತ್ತದೆ. ಏಜೆನ್ಸಿಗಳ ದುರುಪಯೋಗದ ಬಗ್ಗೆ ಚರ್ಚೆ ಮಾಡಲು ಮನವಿ ಮಾಡಿದಾಗ ಸದನ ಮುಂದೂಡಲಾಗುತ್ತದೆ ಎಂದು ಆರೋಪಿಸಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿಕೆ, ತನಿಖಾ ಸಂಸ್ಥೆಗಳ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲು ಸಿದ್ಧರಿಲ್ಲದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ದೇಶದ ಜನಸಾಮಾನ್ಯರ ಧ್ವನಿಯನ್ನು ದಮನ ಮಾಡಲಾಗುತ್ತಿದೆ. ಈ ದುರಹಂಕಾರಿ ಹಾಗೂ ಸರ್ವಾಧಿಕಾರಿ ಸರ್ಕಾರದ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES