Monday, December 23, 2024

ಸಿಲಿಕಾನ್​ ಸಿಟಿಯಲ್ಲಿ ಇಂದು ಆಟೋ ಮತ್ತು ಟ್ಯಾಕ್ಸಿ ಸಿಗೋದು ಡೌಟ್

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಬೀದಿಗಿಳಿದ ಆಟೋ ಮತ್ತು ಟ್ಯಾಕ್ಸಿ ಚಾಲಕರು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡಲಿದ್ದಾರೆ.

ರ್ಯಾಪಿಡೋ ಬೈಕ್ ಟ್ಯಾಕ್ಸಿ ವಿರುದ್ಧ ಮತ್ತೆ ಪ್ರತಿಭಟನೆ ನಡೆಸಲಿದ್ದು, ಅಟೋ ಮತ್ತು ಟ್ಯಾಕ್ಸಿ ಡ್ರೈವರ್ ಅಸೋಸಿಯೇಷನ್ ನಿಂದ ಮುಷ್ಕರ ನಡೆಯಲಿದೆ. ಬೈಕ್ ಟ್ಯಾಕ್ಸಿಯಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರ ಬದುಕು ದುಸ್ಥರವಾಗಿದೆ.

ಇನ್ನು, RTO ಗಮನಕ್ಕೆ ಇದ್ರೂ ಅಧಿಕಾರಿಗಳು ಜಾಣ ಕುರುಡು ತನ ಪ್ರಯೋಗ ಮಾಡ್ತಿದ್ದಾರೆ. ಹೀಗಾಗಿ ಕೂಡಲೇ ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನ ಬ್ಯಾನ್ ಗೆ ಒತ್ತಾಯ ಮಾಡಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಆಟೋ ಮತ್ತು ಟ್ಯಾಕ್ಸಿ ಡ್ರೈವರ್​​ಗಳಿಂದ ಮುಷ್ಕರ ನಡೆಯಲಿದೆ. ಇಂದು ಬೆಳಗ್ಗೆ ಯಿಂದ ಸಂಜೆವರೆಗೆ ಯಾವುದೇ ವಾಹನಗಳು ರೋಡ್ ಗೆ ಇಳಿಸದೇ ಪ್ರತಿಭಟನೆ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ.

RELATED ARTICLES

Related Articles

TRENDING ARTICLES