ಮೈಸೂರು: ಸಾಂಸ್ಕ್ರತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದೆ.ನಾಡ ದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ಕಡೆಯ ಅಷಾಢ ಶುಕ್ರವಾರದ ನಿಮಿತ್ತ ಶಕ್ತಿ ದೇವತೆ ಚಾಮುಂಡಿ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ವಜ್ರಾಭರಣಗಳಿಂದ ಅಲಂಕೃತಗೊಂಡು ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ದೇವಿಯನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡ್ರು.
ಆಷಾಢ ಮಾಸದಲ್ಲಿ ಶಕ್ತಿ ದೇವತೆ ದರ್ಶನ ಪಡೆದರೆ ಇಷ್ಟಾರ್ಥ ನೆರವೇರಲಿದೆ ಎಂದು ಪುರಾಣ ಹೇಳುತ್ತದೆ. ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಶಕ್ತಿ ದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಮುಂಜಾನೆ 3 : 30 ರಿಂದ ಅಭಿಷೇಕದೊಂದಿಗೆ ಪೂಜಾ ಕೈಂಕರ್ಯ ಆರಂಭಿಸಲಾಯಿತು. ಚಾಮುಂಡೇಶ್ವರಿ ದೇವಿಗೆ ವಿವಿಧ ವಜ್ರಾಭರಣಗಳಿಂದ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ಕುಂಕುಮಾರ್ಚನೆ ಸೇರಿ ವಿವಿಧ ಪೂಜೆಗಳ ನಂತರ 5:30ಕ್ಕೆ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.ಕಣ್ಮನ ಸೆಳೆಯುವಂತೆ ವಿವಿಧ ರೀತಿಯ ಹೂಗಳಿಂದ ದೇವಾಲಯದ ಪ್ರಾಂಗಣವನ್ನು ಅತ್ಯಾಕರ್ಷಕವಾಗಿ ಅಲಂಕರಿಸಲಾಗಿತ್ತು.
Ch
ಮೈಸೂರು ಮಾತ್ರವಲ್ಲದೆ ದೇಶದ ಹಲವು ರಾಜ್ಯಗಳಿಂದ ಕೂಡ ಭಕ್ತರು ಬಂದಿದ್ದರು. ದರ್ಶನಕ್ಕೆ ಕನಿಷ್ಠ ಮೂರು ಗಂಟೆಗಳ ಸಮಯ ಹಿಡಿಯಿತು. ಆದರೂ ಶಕ್ತಿ ದೇವತೆ ದರ್ಶನ ಪಡಯಬೇಕೆಂದು ತಾಳ್ಮೆಯಿಂದ ಕಾದು ದೇವರ ದರ್ಶನ ಪಡೆದು ಧನ್ಯತಾ ಭಾವ ಮೆರೆದರು. ಒಂದೆಡೆ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಭಕ್ತರಿಗೆ ಅವಕಾಶವಿದ್ರೆ, ಮತ್ತೊಂದೆಡೆ ಸಾವಿರ ಮೆಟ್ಟಿಲುಗಳನ್ನು ಹತ್ತುವ ಮೂಲಕ ದೇವಿಯ ದರ್ಶನ ಪಡೆದ್ರು.
ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆ ಬೆಟ್ಟದ ಕಿರಿದಾದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗದಂತೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿತ್ತು. ಭಕ್ತರಿಗೆ KSRTC ಬಸ್ಸಿನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ ಆಷಾಢ ಮಾಸದ ನಾಲ್ಕು ಶುಕ್ರವಾರವೂ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿತು. ಆಷಾಢದಲ್ಲಿ ಶಕ್ತಿ ದೇವಿಯ ದರ್ಶನ ಪಡೆದರೆ ಅಮ್ಮ ಇಷ್ಟಾರ್ಥ ಸಿದ್ದಿಸುತ್ತೆ ಅನ್ನೋ ನಂಬಿಕೆಯಂತೆ ದೇವಿಯ ದರ್ಶನ ಪಡೆದು ಭಕ್ತರು ಪುನೀತರಾದ್ರು.
ಕ್ಯಾಮರಾ ಮನ್ ಹರೀಶ್ ಜೊತೆ ಸುರೇಶ್ ಬಿ ಪವರ್ ಟಿವಿ ಮೈಸೂರು.