ನವದೆಹಲಿ: ಹಾಂಗ್‌ಕಾಂಗ್‌ನಿಂದ ನೀರವ್ ಮೋದಿ ಸಮೂಹಕ್ಕೆ ಸೇರಿದ ರೂ253.62 ಕೋಟಿ ಮೌಲ್ಯದ ರತ್ನಗಳು, ಆಭರಣ ಹಾಗೂ ಬ್ಯಾಂಕ್ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದಲ್ಲಿ ದೇಶ ತೊರೆದು ಪರಾರಿಯಾಗಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ಸದ್ಯ ಬ್ರಿಟನ್‌ನಲ್ಲಿ ಜೈಲಿನಲ್ಲಿದ್ದಾರೆ. ಪಿಎನ್‌ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಕೂಡ ಅವರ ವಿರುದ್ಧ ತನಿಖೆ ನಡೆಸುತ್ತಿದೆ.