Friday, November 22, 2024

ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ಕೊಟ್ಟಿದೆ : ಕೆ.ಎಸ್.ಈಶ್ವರಪ್ಪ

ಮೈಸೂರು: ಸಿಎಂ ಆಗಿದ್ದ ಸಿದ್ದರಾಮಯ್ಯನವರಿಗೆ ಪ್ರಕರಣದ ತನಿಖೆಗಳು ಹೇಗೆ ನಡೆಯುತ್ತದೆ ಎಂದು ಗೊತ್ತಿದ್ದರು ಬಿ ರಿಪೋರ್ಟ್ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವುದು ಬೇಸರ ಮೂಡಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ಬಿ ರಿಪೋರ್ಟ್ ವಿಚಾರ ನನಗೆ ಮೊದಲ ದಿನವೇ ಈ ಪ್ರಕರಣದಿಂದ‌ ಆರೋಪ ಮುಕ್ತನಾಗಿ ಬರುತ್ತೇನೆಂದು ಗೊತ್ತಿತ್ತು. ನಾನು ಈ ಪ್ರಕರಣದಲ್ಲಿ ಯಾವ ತಪ್ಪು ಮಾಡಿಲ್ಲಾ. ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ಕೊಟ್ಟಿದೆ. ತನಿಖೆ ಮೂಲಕ ಈಗ ಸಂಪೂರ್ಣ ಆರೋಪ ಮುಕ್ತನಾಗಿದ್ದೇನೆ ಎಂದರು.

ಇನ್ನು, ಪ್ರಕರಣದಿಂದ ಪಕ್ಷಕ್ಕೆ ಇದ್ದ ಮುಜುಗರ ಈಗ ನಿವಾರಣೆಯಾಗಿದೆ. ಬಿ ರಿಪೋರ್ಟ್ ಆದ್ರು ಕಾಂಗ್ರೆಸ್ ಈ ಪ್ರಕರಣದ ಬಗ್ಗೆ ಟೀಕೆ ಮಾಡುತ್ತಿರುವುದು ಬೇಸರ ತರಿಸಿದೆ. ಸಿಎಂ ಆಗಿದ್ದ ಸಿದ್ದರಾಮಯ್ಯನವರಿಗೆ ಪ್ರಕರಣದ ತನಿಖೆಗಳು ಹೇಗೆ ನಡೆಯುತ್ತದೆ ಎಂದು ಗೊತ್ತಿದ್ದರು ಬಿ ರಿಪೋರ್ಟ್ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವುದು ಬೇಸರ ಮೂಡಿಸಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಕಾನೂನು ಪಂಡಿತರ ಆಗಿದ್ದಾರೆ. ಸುಮ್ಮನೆ ಪ್ರಕರಣದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ನಾನು ಸಚಿವ ಸಂಪುಟ ಮತ್ತೆ ಸೇರುವುದು ಪಕ್ಷದ ನಾಯಕರುಗಳಿಗೆ ಬಿಟ್ಟ ವಿಚಾರ. ನಂದು ಯಾವ ತಪ್ಪು ಇರದಿದ್ದರು ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದೆ. ಈಗ ಆರೋಪ ಮುಕ್ತನಾಗಿದ್ದೇನೆ. ಸಂಪುಟ ಭಾಗವಾಗುವ ಎಲ್ಲಾ ನಿರ್ಧಾರಗಳು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು.

RELATED ARTICLES

Related Articles

TRENDING ARTICLES