Wednesday, January 22, 2025

ಸಿದ್ದರಾಮೋತ್ಸವ ಅಲ್ಲ ಅದು ಅವ್ರ ಕೊನೆಗಾಲೋತ್ಸವ : ಲಕ್ಷ್ಮಣ ಸವದಿ

ಬಾಗಲಕೋಟೆ: ಸಿದ್ದರಾಮೋತ್ಸವ ಅದು ಸಿದ್ದರಾಮಯ್ಯರ ಕೊನೆಗಾಲೋತ್ಸವ ಆಗುತ್ತದೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿದ್ದರಾಮೋತ್ಸವದಿಂದ ಬಿಜೆಪಿಗೆ ಹುಮ್ಮಸ್ಸು, ಆತ್ಮಸ್ಥೈರ್ಯ ಬಂದಿದೆ. ಹೊಸ ಅಲೆಯನ್ನು ಸೃಷ್ಟಿ ಮಾಡುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ. ಹೀಗಾಗಿ ಸಿದ್ದರಾಮೋತ್ಸವ ಬಗ್ಗೆ ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿಲ್ಲ. ಸಿದ್ದರಾಮೋತ್ಸವ ಅಲ್ಲ, ಸಿದ್ದರಾಮ ಕೊನೆಗಾಲೋತ್ಸವ ಆಗುತ್ತೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ದೇಶದಲ್ಲಿ ಬೆರಳೆಣಿಕೆಯಷ್ಟು ಮಾತ್ರ ಇದೆ. ರಾಜಾಸ್ಥಾನ ಸೇರಿ ಕೆಲ ಸಣ್ಣಪುಟ್ಟ ರಾಜ್ಯಗಳಲ್ಲಿ ಮಾತ್ರವೇ ಉಳಿದಿದೆ. ಕಾಂಗ್ರೆಸ್ ಬಗ್ಗೆ ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುತ್ತಾರೆ ಅಂತಾರೆ. ನಾನು ಈ ಮಾತು ಒಪ್ಪಲ್ಲ. ಗರ್ಭಿಣಿ ಆದರೆ ತಾನೆ ಕುಲಾಯಿ ಹೊಲಿಸುವುದು. ಕಾಂಗ್ರೆಸ್ಸಿನ ತಾಯಿ ಬಂಜೆ ಆಗಿದ್ದಾಳೆ. ಆ ತಾಯಿ ಗರ್ಭಿಣಿಯೂ ಆಗಲ್ಲ, ಕೂಸೂ ಹಡಿಯಲ್ಲ.  ಹೀಗಾಗಿ ಕುಲಾಯಿ ಹೊಲಿಸುವ ಪ್ರಸಂಗವೂ ಬರಲ್ಲ ಎಂದು ಲೇವಡಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES