Monday, December 23, 2024

ರಾಹುಲ್​ಗೆ ಕೋವಿಡ್: ಟಿ-20 ಸರಣಿಗೆ ಅಲಭ್ಯ

ಬೆಂಗಳೂರು : ಶಸ್ತ್ರಚಿಕಿತ್ಸೆಗೊಳಗಾಗಿ ಗುಣಮುಖರಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದ ಕೆ.ಎಲ್​ . ರಾಹುಲ್​ಗೆ ಕೋವಿಡ್ ದೃಢಪಟ್ಟಿದ್ದು, ವೆಸ್ಟ್​ ಇಂಡೀಸ್​ ವಿರುದ್ಧದ ಟಿ-20 ಸರಣಿಗೆ ಲಭ್ಯರಾಗುವುದು ಸಂಶಯ ಎನ್ನಲಾಗಿದೆ.

ಇದರ ಬೆನ್ನಲ್ಲೇ ತರಬೇತಿ ವೇಳೆ ಗಾಯಗೊಂಡಿರುವ ರವೀಂದ್ರ ಜಡೇಜಾ ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ನಾಳೆ ಭಾರತ – ವೆಸ್ಟ್ ಇಂಡೀಸ್ ತಂಡಗಳ ಮಧ್ಯೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಮೊಣಕಾಲಿನ ನೋವಿಗೊಳಗಾಗಿರುವ ರವೀಂದ್ರ ಜಡೇಜಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ನಾಳೆಯ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ-20 ವಿಶ್ವಕಪ್​ ದೃಷ್ಟಿಯಿಂದ ಜಡೇಜಾಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES