Monday, December 23, 2024

ಬಹುಭಾಷಾ ನಟ ಅರ್ಜುನ್ ಸರ್ಜಾ ತಾಯಿ ವಿಧಿವಶ

ಬೆಂಗಳೂರು: ಸ್ಯಾಂಡಲ್​ವುಡ್​ ಸೇರಿದಂತೆ ಇತರೆ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಟ ಅರ್ಜುನ್ ಸರ್ಜಾ ಅವರ ತಾಯಿ ಹಾಗೂ ಹಿರಿಯ ನಟ ಶಕ್ತಿಪ್ರಸಾದ್ ಅವರ ಧರ್ಮಪತ್ನಿ ಲಕ್ಷ್ಮೀ ದೇವಮ್ಮ(85) ಅವರು ಶನಿವಾರ ವಿಧಿವಶರಾಗಿದ್ದಾರೆ.

ಲಕ್ಷ್ಮೀ ದೇವಮ್ಮ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಇಂದು ನಿಧರಾಗಿದ್ದಾರೆ.

ಬಲ್ಲ ಮೂಲಗಳ ಪ್ರಕಾರ ಲಕ್ಷ್ಮಿದೇವಮ್ಮ ಅವರ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪಾರ್ಥಿವ ಶರೀರವನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಿಂದ ಅರ್ಜುನ್ ಸರ್ಜಾ ಅವರ ನಿವಾಸಕ್ಕೆ ರವಾನಿಸಲಾಗಿದೆ ಎನ್ನಲಾಗುತ್ತಿದೆ.

ಕೆ. ಆರ್ ರಸ್ತೆಯ ಶಾಸ್ತ್ರೀ ನಗರದ ಅರ್ಜುನ್ ಸರ್ಜಾ ನಿವಾಸಕ್ಕೆ ಪಾರ್ಥೀವ ಶರೀರ ರವಾನೆ ಮಾಡಲಾಗಿದೆ. ನಿವಾಸದಲ್ಲಿ ಕುಟುಂಬ, ಬಂಧು ಮಿತ್ರರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಬೆಳ್ಳಂಬೆಳಗ್ಗೆ ಬೆಂಗಳೂರಿನ ನಿವಾಸದಿಂದ ಸ್ವಗ್ರಾಮವಾದ ತುಮಕೂರಿನ ಮಧುಗಿರಿ ಬಳಿಯ ಜಕ್ಕೇನಹಳ್ಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನದೊಂದಿಗೆ ಸಂಸ್ಕಾರ ಮಾಡಲಾಗುತ್ತದೆ. ಇದು ಶಕ್ತಿ ಪ್ರಸಾದ್ ಅವರ ಹುಟ್ಟೂರು ಕೂಡ.

RELATED ARTICLES

Related Articles

TRENDING ARTICLES