Sunday, September 8, 2024

ರಾತ್ರಿಯೂ ರಾಷ್ಟ್ರಧ್ವಜ ಹಾರಿಸಬಹುದು : ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವು ಧ್ವಜ ಸಂಹಿತೆಯಲ್ಲಿ ಬದಲಾವಣೆ ಮಾಡಿದ್ದು, ಇನ್ನು ಮುಂದೆ ರಾಷ್ಟ್ರಧ್ವಜವನ್ನು ರಾತ್ರಿಯೂ ಹಾರಿಸಬಹುದು ಮತ್ತು ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್‌ ಧ್ವಜಗಳನ್ನೂ ಬಳಸಬಹುದಾಗಿದೆ.

‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ಆಗಸ್ಟ್‌ 13ರಿಂದ 15ರ ವರೆಗೆ ನಡೆಯಲಿರುವ ‘ಹರ್‌ ಘರ್‌ ತಿರಂಗ’(ಪ್ರತಿಯೊಬ್ಬರ ಮನೆಯಲ್ಲಿ ತ್ರಿವರ್ಣ ಧ್ವಜ) ಅಭಿಯಾನದ ಅಂಗವಾಗಿ ಸರ್ಕಾರವು ಈ ಕ್ರಮ ಕೈಗೊಂಡಿದೆ.

ಬದಲಾವಣೆಯಾಗಿರುವ ಧ್ವಜ ಸಂಹಿತೆಯ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ ಅವರು ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಈ ಹಿಂದೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಮಾತ್ರ ತ್ರಿವರ್ಣ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಯಂತ್ರದಿಂದ ತಯಾರಿಸಿದ ಮತ್ತು ಪಾಲಿಸ್ಟರ್‌ ಧ್ವಜಗಳನ್ನು ಬಳಸಲು ಅನುಮತಿ ಇರಲಿಲ್ಲ.

RELATED ARTICLES

Related Articles

TRENDING ARTICLES