Thursday, January 23, 2025

ವಿಂಡೀಸ್‌ ವಿರುದ್ಧ ಭಾರತಕ್ಕೆ ರೋಚಕ ಜಯ

ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಇದರೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಪೋರ್ಟ್ ಆಫ್ ಸ್ಪೇನ್​​ನ ಕ್ವೀನ್ಸ್ ಪಾರ್ಕ್ ಓವಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 3 ರನ್‌ ಅಂತರದ ರೋಮಾಂಚನಕಾರಿ ಜಯ ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಆತಿಥೇಯ ತಂಡದ ವಿರುದ್ಧ ಉತ್ತಮ ಮೊತ್ತ ಕಲೆಹಾಕಿತ್ತು. ನಾಯಕ ಶಿಖರ್ ಧವನ್, ಶುಭ್‌ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧ ಶತಕದ ನೆರವಿನಿಂದ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿತು. 309 ರನ್‌ ಗುರಿ ಬೆನ್ನತ್ತಿದ ಆತಿಥೇಯ ವೆಸ್ಟ್ ಇಂಡೀಸ್ ತಂಡ, ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 305 ರನ್ ಗಳಿಸಿ ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡಿತು. ಶ್ರೇಯಸ್ ಅಯ್ಯರ್ ವಿಂಡೀಸ್ ಬ್ಯಾಟರ್​​ ಶಮರ್ ಬ್ರೂಕ್ಸ್ ಅವರನ್ನು ಔಟ್ ಮಾಡಿದಾಗ ಖುಷಿಯಿಂದ ಡ್ಯಾನ್ಸ್ ಕೂಡ ಮಾಡಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

RELATED ARTICLES

Related Articles

TRENDING ARTICLES