Wednesday, January 22, 2025

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್

ಒಂದ್ಕಡೆ ಮಾಜಿ ಸಿಎಂ ಬಿಎಸ್​ವೈ ಸಕ್ರಿಯ ರಾಜಕಾರಣದಿಂದ ದೂರ ಸರಿಯಲು ಮುಂದಾದ್ರೆ ಮತ್ತೊಂದೆಡೆ ಭ್ರಷ್ಟಾಚಾರ ಪ್ರಕರಣದಲ್ಲಿ ಬಿ. ಎಸ್.ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.

ಕರ್ನಾಟಕ ಹೈಕೋರ್ಟ್ ಈ ಮುನ್ನ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ FIR​ ರದ್ದುಗೊಳಿಸಲು ನಿರಾಕರಿಸಿತ್ತು. ಬಿಎಸ್​ವೈ ಮೇಲಿದ್ದ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿ ದೇಶದ ಸರ್ವೋಚ್ಛ ನ್ಯಾಯಾಲಯ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಿಟ್ಟುಸಿರು ಬಿಡುವಂತಾಗಿದೆ.

2006-07ರಲ್ಲಿನ ಡಿನೋಟಿಫೈ ಪ್ರಕರಣಗಳಲ್ಲಿ BSY ಅವರ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಆದರೆ ಈ ಆದೇಶದ ವಿರುದ್ದ ಬಿಎಸ್​ವೈ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ BSY ತಮ್ಮ ಮೇಲಿದ್ದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.

RELATED ARTICLES

Related Articles

TRENDING ARTICLES