Monday, December 23, 2024

ಆಂಧ್ರದ ಚಿತ್ತೂರು ಬಳಿ ಭೀಕರ ಅಪಘಾತ – ಮೂವರು ಸಾವು

ಕೋಲಾರ : ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಪರಿಣಾಮ ಬೆಂಗಳೂರಿನ ಇಬ್ಬರು ಪೊಲೀಸರು, ಓರ್ವ ಖಾಸಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಪೂತಲಪಟ್ಟು ಮಂಡಲ ಪಿ.ಕೊತ್ತಕೋಟ ರೈಲ್ವೆ ಕೆಳ ಸೇತುವೆ ಬಳಿ ನಡೆದಿದೆ.

ಘಟನೆಯಲ್ಲಿ ಬೆಂಗಳೂರಿನ ಶಿವಾಜಿನಗರ ಪಿಎಸ್ಸೈ ಅವಿನಾಶ್, ಪೇದೆ ಅನಿಲ್ ಹಾಗೂ ಕಾರು ಚಾಲಕ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಶರಣಬಸವ, ಪಿಎಸ್ಸೈ ದೀಕ್ಷಿತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ತಮಿಳುನಾಡಿನ ವೇಲೂರು ಸಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಂಜಾ ಕೇಸ್‌ಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕಾಗಿ ಶಿವಾಜಿನಗರದ ಇಬ್ನರು ಪಿಎಸ್‌ಐ, ಮೂವರು ಪೇದೆಗಳು ಸೇರಿ 6 ಪೊಲೀಸರ ತಂಡ ಆಂಧ್ರ ಪ್ರದೇಶದ ಚಿತ್ತೂರಿಗೆ ಖಾಸಗಿ ಟ್ರಾವೆಲ್ಸ್ ನಿಂದ ಕಾರನ್ನು ಬಾಡಿಗೆ ಪಡೆದು ತೆರಳಿತ್ತು. ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಚಿತ್ತೂರು ಬಳಿಯ ಕೊತ್ತಕೋಟ ಬಳಿ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರಿಂದ ಬೆಂಗಳೂರು ಪೊಲೀಸರು ಮಾಹಿತಿ ಪಡೆದುಕೊಂಡಿದ್ದು, ಅಪಘಾತ ಸ್ಥಳಕ್ಕೆ ಪುಲಿಕೇಶಿನಗರ ಎಸಿಪಿ ಅಬ್ದುಲ್, ಶಿವಾಜಿನಗರ ಪೊಲೀಸರು ತೆರಳಿದ್ದಾರೆ.

ಇನ್ನು, ನಿದ್ದೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇವರೆಲ್ಲರೂ ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಗಳಾಗಿದ್ದು ತನಿಖೆಯ ಸಂಬಂಧ ತೆರಳುತ್ತಿದ್ದರು. ಗಾಯಗೊಂಡ ಸಿಬ್ಬಂದಿಗಳ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ಎಲ್ಲಾ ಅಗತ್ಯ ಕ್ರಮಗಳನ್ನ ಅಂಧ್ರ ಪೊಲೀಸರು ಜರುಗಿಸಿದ್ದಾರೆ. ಸ್ಥಳೀಯ ಪೊಲೀಸರು ಘಟನೆಯ ಸಂಬಂಧ ತನಿಖೆಯನ್ನ ಕೈಗೊಂಡಿದ್ದಾರೆ.

RELATED ARTICLES

Related Articles

TRENDING ARTICLES