Wednesday, January 22, 2025

ಕೊಪ್ಪಳದಲ್ಲಿ ಭೀಕರ ಅಪಘಾತ : 6 ಮಂದಿ ಸ್ಥಳದಲ್ಲೇ ಸಾವು

ಕೊಪ್ಪಳ : ಸ್ಕಾರ್ಪಿಯೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮದಿಂದಾಗಿ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ದುರ್ಮರಣವಾದ ಘಟನೆ ಕುಕನೂರು ತಾಲೂಕಿನ ಭಾನಾಪುರ ಬಳಿ ನಡೆದಿದೆ.

ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ (62), ಗಿರಿಜಮ್ಮ (45), ಶಾಂತಮ್ಮ(35) ಪಾರ್ವತಮ್ಮ(32), ಕಸ್ತೂರಮ್ಮ(20) ಮೃತಪಟ್ಟಿದ್ದಾರೆ. ಆದರೆ ಇನ್ನು, ನಾಲ್ಕು ಮಂದಿಗೆ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಕೊಪ್ಪಳದಲ್ಲಿ ಬರ್ತ್​ಡೇ ಪಾರ್ಟಿ ಮುಗಿಸಿ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದೇವಪ್ಪ ಕೊಪ್ಪದ್​ ಸೇರಿ ಅವರ ಕುಟುಂಬದ 5 ಜನ ಸಾವನ್ನಪ್ಪಿದ್ದು, ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

RELATED ARTICLES

Related Articles

TRENDING ARTICLES