Thursday, January 9, 2025

ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ : ಹವಾಮಾನ ಇಲಾಖೆ ಸೂಚನೆ

ಬೆಂಗಳೂರು : ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು, ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES