Sunday, December 22, 2024

ಚೆನ್ನೈನಲ್ಲಿ ಇಂದು ವಿಕ್ರಾಂತ್​ ರೋಣನ ಆರ್ಭಟ

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಪ್ಯಾನ್ ವರ್ಲ್ಡ್​ ಸಿನಿಮಾ ವಿಕ್ರಾಂತ್ ರೋಣ ರಿಲೀಸ್​ಗೆ ದಿನಗಣನೆ ಶುರುವಾಗಿದೆ. ಸಿನಿಮಾ ಇದೇ ಜುಲೈ 28ಕ್ಕೆ ವಿಶ್ವದಾದ್ಯಂತ ತೆರೆಗಪ್ಪಳಿಸುತ್ತಿದ್ದು, ಪ್ರಚಾರ ಕಾರ್ಯಗಳನ್ನು ಭರದಿಂದ ನಡೆಸುತ್ತಿದೆ ಚಿತ್ರತಂಡ. ಈಗಾಗಲೇ ಚೆನ್ನೈನಲ್ಲಿ ಬೀಡುಬಿಟ್ಟಿರೋ ಸುದೀಪ್ ಅಂಡ್ ರೋಣ ಟೀಂ, ಇಂದು ಮಧ್ಯಾಹ್ನ 3.30ಕ್ಕೆ ಪ್ರೀ- ರಿಲೀಸ್ ಇವೆಂಟ್ ನಡೆಸುತ್ತಿದೆ.

ತಮಿಳು ನಟ ಆರ್ಯ, ವಿಜಯ್ ಸೇತುಪತಿ ಕಾರ್ಯಕ್ರಮದಲ್ಲಿ ಭಾಗಿಯಾಗೋ ಸಾಧ್ಯತೆಯಿದೆ. ಅನೂಪ್ ಭಂಡಾರಿ ನಿರ್ದೇಶನದ ಹಾಗೂ ಜಾಕ್ ಮಂಜು ನಿರ್ಮಾಣದ ಈ ಸಿನಿಮಾ ಕನ್ನಡದ ಜೊತೆ ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇಂಗ್ಲಿಷ್​ನಲ್ಲೂ ರಿಲೀಸ್ ಆಗಲಿದೆ.

RELATED ARTICLES

Related Articles

TRENDING ARTICLES