Monday, December 23, 2024

ಬಿಎಸ್​​ವೈ ಪಕ್ಷದ ದೊಡ್ಡ ನಾಯಕ: ಸಚಿವ ಗೋಪಾಲಯ್ಯ

ಹಾಸನ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ನಮ್ಮ ಪಕ್ಷದ ದೊಡ್ಡ ನಾಯಕರಿದ್ದಾರೆ. ಅವರ ಸಲಹೆ ಸೂಚನೆ ಪಕ್ಷಕ್ಕೆ ಅವಶ್ಯಕತೆ ಇದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಇಷ್ಟು ವರ್ಷದ ತಮ್ಮ ರಾಜಕೀಯ ಅನುಭವವನ್ನು ಧಾರೆ ಎರೆಯಲಿದ್ದಾರೆ ಎಂದು ಸಚಿವ ಗೋಪಾಲಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ರಾಜಕೀಯ ನಿವೃತ್ತಿ ಘೋಷಣೆ ಕುರಿತು ಪ್ರತಿಕ್ರಿಯೆ ನೀಡಿದ ಗೋಪಾಲಯ್ಯ, ಆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದ್ದು, ಚರ್ಚೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ಶಿರಾಡಿ ಘಾಟಾ ರಸ್ತೆ ಬಗ್ಗೆ ಪ್ರತಿಕ್ರಿಯಿಸಿ,  ಶಿರಾಡಿ ರಸ್ತೆ ಕಾಮಗಾರಿ ವಿಚಾರವಾಗಿ ಬದಲಿ ರಸ್ತೆ ನಿರ್ಮಾಣಕ್ಕೆ ರೂ.4 ಕೋಟಿ ಬಿಡುಗಡೆ ಮಾಡಿದ್ದು, ಇನ್ನೆರಡು ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

ಶಾಸಕರಾದ ಎ.ಟಿ ರಾಮಸ್ವಾಮಿ, ಎಚ್‌.ಕೆ. ಕುಮಾರಸ್ವಾಮಿ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ಎಂಜಿನಿಯರ್ ಶಂಕರೇಗೌಡ, ಮುಖ್ಯ ಎಂಜಿನಿಯರ್ ‌ಮಹೇಶ್, ಹೇಮಾವತಿ ಜಲಾಶಯ ವಿಭಾಗದ ಸೂಪರಿಂಟೆಂಡೆಂಟ್ ಎಂಜಿನಿಯರ್ ನಳಿನಿ,‌ ಕಾರ್ಯಪಾಲಕ ಎಂಜಿನಿಯರ್ ಯೋಗೀಶ್ ಹಾಜರಿದ್ದರು.

RELATED ARTICLES

Related Articles

TRENDING ARTICLES