ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು’ ಎಂದರು.
ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2022ರ ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು.
CET ಬರೆದಿದ್ದ CBSE, ICSE ವಿದ್ಯಾರ್ಥಿಗಳು KEA ವೆಬ್ಸೈಟ್ ನಲ್ಲಿ ತಮ್ಮ ಅಂಕಗಳನ್ನು ಜು.26ರೊಳಗೆ ಅಪ್ಲೋಡ್ ಮಾಡಲು ಸೂಚಿಸಲಾಗಿದೆ.#KCET2022 ಫಲಿತಾಂಶ ಕೆಳಗಿನ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ:https://t.co/gBMs6UpG7k
— Dr. Ashwathnarayan C. N. (@drashwathcn) July 25, 2022