Friday, September 20, 2024

ಇಂದು ನಾಳೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ

ಬೆಂಗಳೂರು : ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ಬಹುತೇಕ ಕಡೆ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಜುಲೈ 27ರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ.

ಇನ್ನು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತುಸು ದುರ್ಬಲಗೊಂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ಒಣ ಹವೆ ಇರಲಿದ್ದು, ಮಲೆನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮುಂತಾದ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದೆ.

RELATED ARTICLES

Related Articles

TRENDING ARTICLES