Saturday, April 20, 2024

ಬೆಸ್ಕಾಂನಿಂದ ಗ್ರಾಹಕ ಸ್ನೇಹಿ ಡಿಜಿಟಲ್ ಮೀಟರ್ ಅಳವಡಿಕೆ

ಬೆಂಗಳೂರು: ಬೆಸ್ಕಾಂನ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿನ ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ ಡಿಎಲ್ಎಮ್ಎಸ್ ಸ್ಟ್ಯಾಟಿಕ್ (ಡಿವೈಸ್ ಲ್ಯಾಂಗ್ವೇಜ್ ಮೆಸೇಜ್ ಸ್ಪೆಸಿಫಿಕೇಷನ್) ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ (BMAZ) 17,68,000 ಇಲೆಕ್ಟ್ರೊ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಡಿಜಿಟಲ್ ಮೀಟರ್ ಗೆ ಬದಲಾವಣೆ ಮಾಡುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿದೆ. ರಾಜಾಜಿನಗರ, ರಾಜರಾಜೇಶ್ವರಿನಗರ, ಇಂದಿರಾನಗರ ಮತ್ತು ವೈಟ್ ಫೀಲ್ಡ್ ವಿಭಾಗಗಳಲ್ಲಿ ಈಗಾಗಲೇ 16,000 ಸಿಂಗಲ್ ಫೇಸ್ ಮತ್ತು 3 ಫೇಸ್ ಡಿಜಿಟಲ್ ಮಾಪನಗಳನ್ನು ಅಳವಡಿಸಲಾಗಿದೆ.

ಡಿಜಿಟಲ್ ಮೀಟರ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು ಪ್ರತಿನಿತ್ಯ 700 ರಿಂದ 900 ಮೀಟರ್ ಗಳನ್ನು ಅಳವಡಿಸಲಾಗುತ್ತಿದೆ. ಬೆಸ್ಕಾಂ ಒಂದು ವಿಭಾಗದಲ್ಲಿ ಮೀಟರ್ ಅಳವಡಿಕೆ ಕಾರ್ಯ ಪೂರ್ಣಗೊಂಡ ನಂತರವೇ ಇನ್ನೊಂದು ವಿಭಾಗದಲ್ಲಿ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.2024ರ ವೇಳೆಗೆ 17,68,000 ಇಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಜಿಟಲ್ ಮೀಟರ್ ಗೆ ಬದಲಿಸುವ ಕಾರ್ಯ ಪೂರ್ಣಗೊಳಲ್ಲಿದೆ ಎಂದು ಬೆಸ್ಕಾಂನ ತಿಳಿಸಿದೆ.

RELATED ARTICLES

Related Articles

TRENDING ARTICLES