Sunday, December 22, 2024

ಟ್ರಯಲ್ ಬ್ಲಾಸ್ಟ್ ನಡೆಸೋದನ್ನ ಸರ್ಕಾರ ನಿಲ್ಲಿಸಿದೆ : ಹೆಚ್​​ಡಿಕೆ

ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಬೇಕ ಬೇಡವಾ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಪರಿಸ್ಥಿತಿ, ವಾಸ್ತವಾಂಶ ತಿಳಿದುಕೊಂಡು ಸರ್ಕಾರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ಮಾಡಬೇಕು ಎಂದು ಮದ್ದೂರುನಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟ್ರಯಲ್ ಬ್ಲಾಸ್ಟ್ ನಡೆಸೋದನ್ನ ಸರ್ಕಾರ ನಿಲ್ಲಿಸಿದೆ. ಅಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ರೈತರು ಆತಂಕದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪರಿಸ್ಥಿತಿ, ವಾಸ್ತವಾಂಶ ತಿಳಿದುಕೊಂಡು ಸರ್ಕಾರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ಮಾಡಬೇಕು ಎಂದರು.

ಇನ್ನು, ಒಕ್ಕಲಿಗರ ಸಿಎಂ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಒಕ್ಕಲಿಗರ ನಾಯಕ ಯಾರು ಎಂದು ಜನ ತೀರ್ಮಾನ ಮಾಡ್ತಾರೆ. ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಅಂತ ಯಾರು ಹೇಳಿದ್ರು..? ಅವರು ಚುನಾವಣೆಯಲ್ಲಿ ನಿಲ್ಲಲ್ಲ. 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡೋದಿಲ್ಲಾ ಎಂದು ಹೇಳಿದರು.

RELATED ARTICLES

Related Articles

TRENDING ARTICLES