Monday, December 23, 2024

ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರ ಅಡ್ಡಿ

ಮಂಗಳೂರು : ನಿನ್ನೆ ನಡೆದ ಘಟನೆಗೂ ಕಿಸ್ ಪಂದ್ಯ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.

ಮಂಗಳೂರಿನ ಪಬ್ ಮೇಲೆ ಬಜರಂಗದಳ ದಾಳಿ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನಗರದ ಪ್ರಸಿದ್ಧ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಪಬ್​​ನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದು, ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಬಲ್ಮಠದ ಪಬ್ ಮುಂದೆ ನಿನ್ನೆ ರಾತ್ರಿ ಹತ್ತು-ಹನ್ನೆರೆಡು ಮಂದಿ ಜಮಾಯಿಸಿದ್ದರು. ಪಬ್ ಒಳಗೆ ಅಪ್ರಾಪ್ತರು ಮದ್ಯ ಸೇವನೆ ಮಾಡುತ್ತಿದ್ದರು ಎಂಬ ಆರೋಪ ಅವರದ್ದಾಗಿತ್ತು. ಬೌನ್ಸರ್ ಪಬ್ ಮ್ಯಾನೇಜರ್ ಜೊತೆ ಮಾತನಾಡಿ ಪಬ್ ಒಳಗಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದಾನೆ ಎಂದರು.

ಅದಲ್ಲದೇ, ಇಲ್ಲಿ ಯಾವುದೇ ಅಟ್ಯಾಕ್, ದೈಹಿಕ ಹಲ್ಲೆಗಳು ನಡೆದಿಲ್ಲ. ಪಬ್ ಒಳಗೆ ಯಾರೂ ಪ್ರವೇಶ ಮಾಡಿಲ್ಲ. ನಿನ್ನೆ ನಡೆದ ಘಟನೆಗೂ ಕಿಸ್ ಪಂದ್ಯ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಆ ಪ್ರಕರಣದಲ್ಲಿ ಭಾಗಿಯಾದವರು ಯಾರೂ ನಿನ್ನೆ ಪಬ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ. ಇನ್ನೂ ಈ ಬಗ್ಗೆ ಯಾರೂ ದೂರು ನೀಡಿಲ್ಲ, ದೂರು ನೀಡಿದರೆ ಪ್ರಕರಣ ದಾಖಲು ಮಾಡುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದರು.

RELATED ARTICLES

Related Articles

TRENDING ARTICLES